ಬೆಂಗಳೂರು: ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮದರ್ಶಿ ಮುನಿಕೃಷ್ಣನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೇ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ತಳ್ಳಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಪ್ರಕರಣ ಸಹ ತಡವಾಗಿ ಬೆಳಕಿಗೆ ಬಂದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಇದನ್ನೂ ಓದಿ : ಕೊಲೆ ಮಾಡಿ ಬೈಕ್‌ನಲ್ಲಿ ಹೆಣ ಸಾಗಿಸಿದ ಹಂತಕರು: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಇನ್ನೂ ಮಹಿಳೆ ಸಹ ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದಾರೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ವಿಚಾರವಮ್ನು ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಬೆಳಕಿಗೆ ಬಂದು ಠಾಣೆ ಮೆಟ್ಟಿಲೇರುತ್ತಿದ್ದಂತೆ ಧರ್ಮದರ್ಶಿ ಮುನಿಕೃಷ್ಣ ಪೊಲೀಸರ ಮುಂದೆ ಬೇರೆಯದ್ದೆ ಕಥೆ ಹೇಳಿದ್ದ. ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ : Lip Shape Personality: ತುಟಿಗಳಲ್ಲಿ ಅಡಗಿದ ನಿಮ್ಮ ವ್ಯಕ್ತಿತ್ವದ ಗುಟ್ಟು
ಎಷ್ಟೇ ಮನವಿ ಮಾಡಿಕೊಂಡರೂ ಮಹಿಳೆಗೆ ಕೇಳದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಮುನಿಕೃಷ್ಣನನ್ನು ಬಂಧಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.