ಮೈಸೂರು: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಗ್ರಾಮ ಲೆಕ್ಕಾಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದ ವ್ಯಕ್ತಿಗೆ ಗುಂಡ್ಲುಪೇಟೆ ಜೆಎಂಎಫ್ಸಿ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.


COMMERCIAL BREAK
SCROLL TO CONTINUE READING

ಗುಂಡ್ಲುಪೇಟೆ ತಾಲೂಕಿನ ವಡೆಯನಪುರ ಗ್ರಾಮದ ಶ್ರೀಕಂಠಸ್ವಾಮಿ ಎಂಬವರು ಶಿಕ್ಷೆಗೊಳಗಾದವರು. 2018 ರ ಆ. 1 ರಂದು ಬೊಮ್ಮಲಾಪುರ ವೃತ್ತದ  ಗ್ರಾಮ ಲೆಕ್ಕಾಧಿಕಾರಿಯಾಗಿ (Village Accountant) ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ಮಾಡಿಕೊಟ್ಟ ವಿಚಾರದಲ್ಲಿ ಶ್ರೀಕಂಠಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.


ಇದನ್ನೂ ಓದಿ- ಫೇಸ್‌ಬುಕ್‌ ಸುಂದರಿ ಹಿಂದೆ ಬಿದ್ದ ಅರ್ಚಕನಿಗೆ ಪಂಗನಾಮ: ಸೈಬರ್ ಕ್ರೈಮ್ ಪೊಲೀಸರಿಗೆ ದೂರು


ಈ ಬಗ್ಗೆ ಬಸವರಾಜು ಗುಂಡ್ಲುಪೇಟೆ ಠಾಣೆಯಲ್ಲಿ ಕಲಂ 353, 514 ರ ಅಡಿ ದೂರು ದಾಖಲಿಸಿದ್ದರು. 


ಇದನ್ನೂ ಓದಿ- ವರದಕ್ಷಿಣೆಗಾಗಿ ಪತ್ನಿ ಕೊಲೆ: 'ಪಿಡಿಒ'ಗೆ ಜೀವಾವಧಿ ಶಿಕ್ಷೆ


ಪ್ರಕರಣದ ಬಗ್ಗೆ ವಾದ-ಪ್ರತಿವಾದ ನಡೆದು ನಿಂದನೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಾಬೀತಾದ ಹಿನ್ನೆಲೆ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾ. ಜೆ.ಶಿವಕುಮಾರ್ ಅಪರಾಧಿಗೆ 3 ವರ್ಷ  ಸಾದಾ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.