Crime News: ಬ್ಯಾನ್ ಆಗಿರುವ ಇ-ಸಿಗರೇಟ್ಗಳ ಸಂಗ್ರಹಿಸಿ ಮಾರಾಟ: ಕೇರಳದ ಆರೋಪಿ ಬಂಧನ
E-cigarettes Seller Arrest: ಆರೋಪಿ ಶೋಯೆಬ್ ಕೆಲ ಕಾಲ ದುಬೈನಲ್ಲಿದ್ದು ಭಾರತಕ್ಕೆ ಮರಳಿ ಬೆಂಗಳೂರಿಗೆ ಬಂದು ಸುದ್ದಗುಂಟೆಪಾಳ್ಯದ ಸಹೋದರನ ಮನೆಯಲ್ಲಿ ವಾಸವಿದ್ದ.
ಬೆಂಗಳೂರು : ಕೇಂದ್ರ ಸರ್ಕಾರ ನಿಷೇಧಿಸಿರುವ ಎಲೆಕ್ಟ್ರಾನಿಕ್ ಸಿಗರೇಟುಗಳನ್ನ ಮನೆಯಲ್ಲಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಶೋಯೆಬ್ ಬಂಧಿತ ಆರೋಪಿಯಾಗಿದ್ದು, ಈತನಿಂದ 3 ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟುಗಳನ್ನ ಸೀಜ್ ಮಾಡಲಾಗಿದೆ. ಆರೋಪಿ ಶೋಯೆಬ್ ಕೆಲ ಕಾಲ ದುಬೈನಲ್ಲಿದ್ದು ಭಾರತಕ್ಕೆ ಮರಳಿ ಬೆಂಗಳೂರಿಗೆ ಬಂದು ಸುದ್ದಗುಂಟೆಪಾಳ್ಯದ ಸಹೋದರನ ಮನೆಯಲ್ಲಿ ವಾಸವಿದ್ದ.
ಇದನ್ನೂ ಓದಿ: Karnataka Weather: ರಾಜ್ಯದೆಲ್ಲೆಡೆ ಚಳಿಯ ಜೊತೆಗೆ ಹೆಚ್ಚಾಗಲಿದೆ ಉಷ್ಣಾಂಶ!
ದುಬೈಯಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಕೊರಿಯರ್ ಮೂಲಕ ಇ-ಸಿಗರೇಟ್ ತರಿಸಿಕೊಳ್ಳುತ್ತಿದ್ದ. ಸಿಗರೇಟ್ ಗಳನ್ನು ಆರೋಪಿ ಮನೆಯಲ್ಲಿಯೇ ಸಂಗ್ರಹಿಸಿಟ್ಟುಕೊಂಡು ಗಿರಾಕಿಗಳಿಗೆ ಸರಬರಾಜು ಮಾಡುತ್ತಿದ್ದ. ಆರೋಪಿಯ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಶೋಯೆಬ್ ನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಬರೋಬ್ಬರಿ 3 ಕೋಟಿ ಮೌಲ್ಯದ 6 ಸಾವಿರ ಇ-ಸಿಗರೇಟುಗಳನ್ನ ವಶಕ್ಕೆ ಪಡೆಯಲಾಗಿದ್ದು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈತನ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.