ಭ್ರಷ್ಟಾಚಾರ ಆರೋಪ: ಹಿರಿಯ IRS ಅಧಿಕಾರಿ ನಿವಾಸದ ಮೇಲೆ ಇಡಿ ದಾಳಿ!

ED raid on senior IRS officer in Mumbai: ಐಆರ್‌ಎಸ್ ಅಧಿಕಾರಿ ಸಚಿನ್ ಸಾವಂತ್ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.  

Written by - Chetana Devarmani | Last Updated : Jun 28, 2023, 04:20 PM IST
  • ಐಆರ್‌ಎಸ್ ಅಧಿಕಾರಿ ನಿವಾಸದ ಮೇಲೆ ಇಡಿ ದಾಳಿ
  • ಐಆರ್‌ಎಸ್ ಅಧಿಕಾರಿ ಸಚಿನ್ ಸಾವಂತ್
  • ಮುಂಬೈನಲ್ಲಿರುವ ನಿವಾಸದಲ್ಲಿ ಶೋಧ ಕಾರ್ಯ
ಭ್ರಷ್ಟಾಚಾರ ಆರೋಪ: ಹಿರಿಯ IRS ಅಧಿಕಾರಿ ನಿವಾಸದ ಮೇಲೆ ಇಡಿ ದಾಳಿ! title=

ಮುಂಬೈ (ಮಹಾರಾಷ್ಟ್ರ): ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ ಕೇಡರ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಐಆರ್‌ಎಸ್ ಅಧಿಕಾರಿ ಸಚಿನ್ ಸಾವಂತ್ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಪ್ರಕರಣದ ತನಿಖೆಯ ಭಾಗವಾಗಿ ಈ ಶೋಧ ನಡೆಸಿದ್ದಾರೆ.

ಅಧಿಕಾರಿಗಳು ಸಾವಂತ್ ಅವರ ಸಂಬಂಧಿಕರ ನಿವಾಸಗಳಲ್ಲಿಯೂ ಶೋಧ ನಡೆಸಿದರು. ಐಆರ್‌ಎಸ್ ಅಧಿಕಾರಿ ಸಚಿನ್ ಸಾವಂತ್ ಈ ಮೊದಲು ಇಡಿಯ ಮುಂಬೈ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಪ್ರಸ್ತುತ ಇವರು ಕಸ್ಟಮ್ಸ್ ಮತ್ತು ಜಿಎಸ್‌ಟಿ ಕೇಡರ್‌ನ ಹೆಚ್ಚುವರಿ ಆಯುಕ್ತರಾಗಿದ್ದಾರೆ. 

ಇದನ್ನೂ ಓದಿ: Mumbai Sea Link ಗೆ ಸಾವರ್ಕರ್ ಹೆಸರು, ಎಂಟಿಹೆಚ್ಎಲ್ ಹೆಸರೂ ಬದಲಾಗಲಿದೆ ಎಂದ ಶಿಂಧೆ ಸರ್ಕಾರ

ಅಕ್ರಮ ಆಸ್ತಿ ಆರೋಪದಡಿ ಸಿಬಿಐ ಅಧಿಕಾರಿಗಳು ಇವರ ವಿರುದ್ಧ ಪ್ರಕರಣ ದಾಖಲಿಸಿದ್ದರು.  ಈ ಕೇಸ್​ ಆಧಾರದ ಮೇಲೆ ಸಚಿನ್​​​​​​​​​ ಸಾವಂತ್​ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ, ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಈ ಹಿಂದೆ ಇಡಿ ಮುಂಬೈ ವಲಯ 2ರಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿದ್ದರು. ಈ ವೇಳೆ, ಕೆಲವು ವಜ್ರ ಕಂಪನಿಗಳು ಅಕ್ರಮವಾಗಿ 500 ಕೋಟಿ ರೂ.ಗೂ ಹೆಚ್ಚು ಹಣವನ್ನು ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಚಿನ್‌ ಸಾವಂತ್‌ ನಡೆಸಿದ್ದರು. 

ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬ ಸಾವಂತ್ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಾವಂತ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿತು ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಇಡಿ ಮುಂಬೈನ ಸಾವಂತ್ ನಿವಾಸ ಸೇರಿದಂತೆ ವಿವಿಧೆಡೆ ಶೋಧ ನಡೆಸಿದೆ.  

ಇದನ್ನೂ ಓದಿ: ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೋ; ತಕ್ಕ ಪಾಠ ಕಲಿಸಿದ 17 ವರ್ಷದ ಬಾಲಕಿ... ವಿಡಿಯೋ ವೈರಲ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News