ಸೋನಿಯಾ ಗಾಂಧಿ ED ವಿಚಾರಣೆ ಮುಕ್ತಾಯ..‌ 3 ದಿನಗಳಲ್ಲಿ 100 ಕ್ಕೂ ಹೆಚ್ಚು ಸವಾಲು

ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಮಾಡಿದೆ. 

Written by - Chetana Devarmani | Last Updated : Jul 27, 2022, 03:23 PM IST
  • ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ
  • ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ಮುಕ್ತಾಯ
  • 3 ದಿನಗಳಲ್ಲಿ 100 ಕ್ಕೂ ಹೆಚ್ಚು ಸವಾಲು
ಸೋನಿಯಾ ಗಾಂಧಿ ED ವಿಚಾರಣೆ ಮುಕ್ತಾಯ..‌ 3 ದಿನಗಳಲ್ಲಿ 100 ಕ್ಕೂ ಹೆಚ್ಚು ಸವಾಲು  title=
ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಮಾಡಿದೆ. ಈ ವೇಳೆ ತನಿಖಾ ಸಂಸ್ಥೆ ಸೋನಿಯಾ ಗಾಂಧಿ ಅವರಿಗೆ ಬಹುತೇಕ ಎಲ್ಲ ಪ್ರಮುಖ ಪ್ರಶ್ನೆಗಳನ್ನು ಕೇಳಿದೆ. 

ಇದನ್ನೂ ಓದಿ: ಭಾರತದ ವಿಶಿಷ್ಟ ರೈಲು ನಿಲ್ದಾಣಗಳು

ವರದಿಯ ಪ್ರಕಾರ, ಮುಂದಿನ ಸಮನ್ಸ್ ಜಾರಿಯಾಗುವವರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಬೇಕಿಲ್ಲ. ಇಡಿ ಮುಂದೆ ಸೋನಿಯಾ ಗಾಂಧಿ ಅವರು ಮೂರನೇ ಬಾರಿಗೆ ಹಾಜರಾಗಿದ್ದು, ಅವರನ್ನು ಒಟ್ಟು 12 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಈ ಅವಧಿಯಲ್ಲಿ 100 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ. 

ಇದಕ್ಕೂ ಮುನ್ನ ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ರಾಹುಲ್ ಗಾಂಧಿ ಅವರಿಗೆ ಐದು ದಿನಗಳಲ್ಲಿ 150ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿತ್ತು. ಮಾಧ್ಯಮ ವರದಿಗಳ ಪ್ರಕಾರ, ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ತೊಡಗಿಸಿಕೊಂಡಿರುವ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಮೂರನೇ ಸುತ್ತಿನ ವಿಚಾರಣೆಗೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್!

ಯಂಗ್ ಇಂಡಿಯನ್‌ನಲ್ಲಿ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಇಬ್ಬರೂ ಬಹುಪಾಲು ಷೇರುದಾರರಾಗಿರುವುದರಿಂದ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಯವರ ಹೇಳಿಕೆಯೊಂದಿಗೆ ಸೋನಿಯಾ ಹೇಳಿಕೆಯನ್ನು ಹೊಂದಿಸುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News