Bengaluru: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆ ಬೆಂಕಿ ಇಟ್ಟ ಉದ್ಯೋಗಿಗಳು!
Prutvi Park Square in HSR Layout: ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ರೊಚ್ಚಿಗೆದ್ದ ಉದ್ಯೋಗಿಗಳು ಕಂಪನಿಗೇ ಬೆಂಕಿ ಇಟ್ಟಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. HSR ಲೇಔಟ್‍ನಲ್ಲಿರುವ ಪೃಥ್ವಿ ಪಾರ್ಕ್ ಸ್ಕ್ವೇರ್(Prutvi Park Square) ರಿಯಲ್ ಎಸ್ಟೇಟ್ ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.
ರಾಹುಲ್ ಪೂಜಾರಿ ಮತ್ತು ಲ್ಯಾವ್ಸನ್ ಪೀಟರ್ ಜಾನ್ ಎಂಬುವರೇ ತಾವು ಕೆಲಸ ಮಾಡುತ್ತಿದ್ದ ಕಂಪನಿಗೆ ಬೆಂಕಿ ಹಚ್ಚಿರುವ ಆರೋಪಿಗಳು. ರಾಹುಲ್ ಏರಿಯಾ ಸೇಲ್ಸ್ ಮ್ಯಾನೇಜರ್ ಆಗಿದ್ದು, ಲ್ಯಾವ್ಸನ್ ಪೀಟರ್ ಜಾನ್ ರೀಜಿನಲ್ ಸೇಲ್ಸ್ ಮ್ಯಾನೇಜರ್ ಆಗಿದ್ದ. ಉಮಾಶಂಕರ್ ಮತ್ತು ರೂಪಾ ಎಂಬುವವರ ಒಡೆತನದಲ್ಲಿ ಈ ಕಂಪನಿ ಇದೆ.
ಇದನ್ನೂ ಓದಿ: ಪ್ರೀತಿ ತಿರಸ್ಕರಿಸಿದ ಯುವತಿಯ ಕತ್ತು ಕೊಯ್ದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ!
ಟಾರ್ಗೆಟ್ ಅಚೀವ್ ಮಾಡದ ಕಾರಣ ಈ ಇಬ್ಬರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ರಾಹುಲ್ ಮತ್ತು ಲ್ಯಾವ್ಸನ್ ರೂಪಾಗೆ ಕರೆ ಮಾಡಿ ತಮೆಗೆ ಸಂಬಳ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ. ಆದರೆ ರೂಪಾ ಮತ್ತು ಉಮಾಶಂಕರ್ ಸಂಬಳ ಕೊಡಲು ನಿರಾಕರಿಸಿದ್ದರಂತೆ. ಹೀಗಾಗಿ ಇದೇ ಕೋಪದಲ್ಲಿ ರಾಹುಲ್ ಮತ್ತು ಲ್ಯಾವ್ಸನ್ ಸೆ.27ರಂದು ಬೆಳಗ್ಗೆ ಕಚೇರಿ ಬಳಿ ಬಂದಿದ್ದರು. ಈ ವೇಳೆ ಹೌಸ್‍ಕೀಪಿಂಗ್ ಕೆಲಸ ಮಾಡುತ್ತಿದ್ದ ಮುನ್ನಿ ಎಂಬಾಕೆಯನ್ನು ಹೊರಬರುವಂತೆ ಹೇಳಿದ್ದಾರೆ. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕರು ಪರಾರಿಯಾಗಿದ್ದಾರೆ.
ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ವಿಮಾನದ ಸೀಟಿನಡಿ ಬಚ್ಚಿಟ್ಟಿದ್ದ 3.73 ಕೆಜಿ ಚಿನ್ನ, ಲಕ್ಷಾಂತರ ಮೌಲ್ಯದ ಫಾರಿನ್ ಕರೆನ್ಸಿ ವಶ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.