ಈಶ್ವರಪ್ಪಗೆ ಮತ್ತೆ ಸಂಕಷ್ಟ: ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಸಂತೋಷ್ ಕುಟುಂಬಸ್ಥರು
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ತನಿಖೆ ನಡೆಸಿ ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ತನಿಖೆ ನಡೆಸಿ ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐ ಒಪ್ಪಿಸಬೇಕೆಂದು ಕೋರಿ ಮೃತ ಸಂತೋಷ್ ಸಹೋದರ ಪ್ರಶಾಂತ್ ನ್ಯಾಯಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಶಾಂತ್, ಸಂತೋಷ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ.
ಇದನ್ನೂ ಓದಿ: Bomb Threat Call : ಮುಂಬೈನ ಸುಪ್ರಸಿದ್ಧ ಹೋಟೆಲ್‌ಗೆ ಬಂತು ಬಾಂಬ್ ಬೆದರಿಕೆ ಕರೆ
ಉಡುಪಿ ಪೊಲೀಸರು ಸರಿಯಾಗಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆಯಲ್ಲಿ ಹಲವು ಪ್ರಭಾವಗಳು ಇವೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದಿದ್ದಾರೆ. ಗುತ್ತಿಗೆದಾರ ಸಂತೋಷ್ ಸರ್ಕಾರ ನೀಡಬೇಕಿದ್ದ ಬಿಲ್ ಮಂಜೂರು ಮಾಡಲು ಆಗಿನ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರಮೋದಿ, ರಾಜ್ಯಪಾಲರಿಗೂ ದೂರು ನೀಡಿದ್ದರು.
ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಉಡುಪಿ ಲಾಡ್ಜ್‌ವೊಂದರಲ್ಲಿ ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಎಸ್‌ಪಿ ವಿಷ್ಣುವರ್ಧನ್ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಈಗ ತನಿಖೆ ಸರಿಯಾಗಿ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಸಂತೋಷ್ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: Crime News : ಗಂಡನ ಮನೆಗೆ ಕನ್ನ ಕಾಕಿದ ಹೆಂಡತಿ.. ನಗದು, ಚಿನ್ನ ದೋಚಿ ಎಸ್ಕೇಪ್!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.