ಬೆಂಗಳೂರು: ಅಡುಗೆ ಮಾಡುವಾಗ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯ ಮಂತ್ರಿ ಮಾಲ್ ಹಿಂಭಾಗ ನಡೆದಿದೆ. ಮೇರಿ (55) ಮೃತ ದುರ್ದೈವಿಯಾಗಿದ್ದಾರೆ. ಮೃತ ಮೇರಿಯ ಮೈದುನ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದ. ಹೀಗಾಗಿ ಇವತ್ತು ತಿಂಗಳ ಕಾರ್ಯವಿದ್ದ ಕಾರಣ ಮೇರಿ ಅಡುಗೆ ಕೆಲಸದಲ್ಲಿ ತೊಡಗಿಕೊಂಡಿದ್ದರು. ಆದರೆ ಗ್ಯಾಸ್ ಲೀಕ್ ಆಗಿರುವುದನ್ನು ಮೇರಿ ಗಮನಿಸಿರಲಿಲ್ಲ.
ಅಡುಗೆ ಮಾಡುವಾಗ ಸ್ಟೌವ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೆಚ್ಚಾಗಿದೆ. ತಕ್ಷಣವೇ ಪಕ್ಕದಲ್ಲಿದ್ದ ಬಟ್ಟೆ, ಗ್ಯಾಸ್ ಪೈಪ್, ಮನೆಯಲ್ಲಿರುವ ವಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಮೇರಿ ಎಷ್ಟೇ ಪ್ರಯತ್ನಪಟ್ಟರು ಸಹ ಅಡುಗೆ ಮನೆಯಿಂದ ಹೊರಬರಲು ಸಾಧ್ಯವಾಗದ ಕಾರಣ ಬೆಂಕಿಗೆ ಸಿಲುಕಿ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಗಾಯಗೊಂಡಿದ್ದ ಮೇರಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನೂ ಘಟನೆ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು
ಸಾಫ್ಟ್‌ವೇರ್ ಕಂಪನಿಯಲ್ಲಿ ಬೆಂಕಿ
ಯಲಹಂಕದ ಸಾಫ್ಟ್‌ವೇರ್ ಕಂಪನಿಯೊಂದರ ಟಾಪ್ ಫ್ಲೋರ್ ನಲ್ಲಿ ಬೆಂಕಿ ಧಗಧಗಿಸಿದೆ. ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಬಿಲ್ಡಿಂಗ್ ನಲ್ಲಿದ್ದ ಉದ್ಯೋಗಿಗಳು ಎದ್ನೋ ಬಿದ್ನೋ ಅಂತಾ ಬಿಲ್ಡಿಂಗ್ ನಿಂದ ಹೊರಬಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ನಾಲ್ಕು ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬಹುಮಹಡಿ ಕಟ್ಟಡವಾದ ಕಾರಣ ಎಂಟನೇ ಮಹಡಿಯಲ್ಲಿ ಬೆಂಕಿ ಕೆನ್ನಾಲಿಗೆ ಹೆಚ್ಚಾಗಿದ್ದು ಏರಿಯಲ್ ಲ್ಯಾಡರ್ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಪಾರ್ಟಿ ನೆಪದಲ್ಲಿ ಸ್ನೇಹಿತನಿಂದಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಬಂಧನ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.