ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ.. ತೀವ್ರ ಗಾಯ

Firing on Ricky Rai in Ramanagara: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ಜಿಲ್ಲೆಯ ಬಿಡದಿ ಬಳಿ ಗುಂಡಿನ ದಾಳಿ ಮಾಡಲಾಗಿದೆ. 

Written by - Chetana Devarmani | Last Updated : Apr 19, 2025, 07:25 AM IST
  • ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್
  • ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ನಡೆದ ಗುಂಡಿನ ದಾಳಿ
  • ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ.. ತೀವ್ರ ಗಾಯ
Rikki Rai

ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿಯ ಬಳಿಯಿರುವ ಮುತ್ತಪ್ಪ ರೈ ನಿವಾಸದ ಮುಂದೆಯೇ ಫೈರಿಂಗ್‌ ಮಾಡಲಾಗಿದೆ. ರಿಕ್ಕಿ ರೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಫೈರಿಂಗ್‌ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ರಿಕ್ಕಿ ಅವರ ಮೂಗು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಿಡದಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಗುಂಡಿನ ದಾಳಿ ಮಾಡಲಾಗಿದೆ. ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. 

ರಿಕ್ಕಿ ರೈ ತಡರಾತ್ರಿ ಬಿಡದಿಯಿಂದ ಬೆಂಗಳೂರಿಗೆ ಹೊರಟಿದ್ದರು. ಮನೆಯಿಂದ ಹೊರ ಬರುತ್ತಿದ್ದಂತೆ ಮನೆಯ ಮುಖ್ಯ ದ್ವಾರದ ಕೂಗಳತೆ ದೂರದಿಂದ ಫೈರಿಂಗ್‌ ಮಾಡಿದ್ದಾರೆ. ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಲಾಗಿದೆ. ರಿಕ್ಕಿ ರೈ ಪ್ರತಿ ಬಾರಿ ಕಾರನ್ನ ತಾನೇ ಡ್ರೈವಿಂಗ್ ಮಾಡುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಲಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ!

ಕೂದಳೆಲೆ ಅಂತರದಲ್ಲಿ ಪ್ರಾಣಪಾಯದಿಂದ ಚಾಲಕ ರಾಜು ಬಚಾವ್ ಆಗಿದ್ದಾರೆ. ಫೈರಿಂಗ್ ಆಗುತ್ತಿದ್ದಂತೆ ಚಾಲಕ ರಾಜು ಮುಂದೆ ಬಗ್ಗಿದ್ದು, ಪಕ್ಕದ ಸೀಟ್ ನಲ್ಲಿದ್ದ ರಿಕ್ಕಿ ರೈ ಮೂಗು ಮತ್ತು ಕೈಗೆ ಗುಂಡು ತಾಕಿದೆ. ಮನೆ ಮುಂಭಾಗದ ಮುಖ್ಯ ರಸ್ತೆಗೆ ಎಂಟ್ರಿ ಆಗುತ್ತಿದ್ದಂತೆ ಏಕಾಏಕಿ ಗುಂಡಿನ ದಾಳಿ ನಡೆದಿದೆ.

ಎರಡು ದಿನದ ಹಿಂದಷ್ಟೇ ರಷ್ಯಾದಿಂದ ರಿಕ್ಕಿ ರೈ ವಾಪಸ್ ಆಗಿದ್ದರು. ರಿಯಲ್ ಎಸ್ಟೇಟ್ ಬಿಸಿನೆಸ್ ನಲ್ಲಿ ಆಕ್ಟಿವ್ ಆಗಿದ್ದರು. ಕಾರು ಚಾಲಕ ರಾಜುನಿಂದ ಘಟ‌ನೆ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಸದ್ಯ ಘಟನಾ  ಸ್ಥಳದಲ್ಲೇ ಸೀನ್ ಆಫ್ ಕ್ರೈಂ ಆಫೀಸರ್ಸ್ ಹಾಗೂ ಎಫ್ಎಸ್ಎಲ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ರಿಕ್ಕಿ ರೈ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಇದನ್ನೂ ಓದಿ : ಮುತ್ತಿನ ಬಲೆಗೆ ಬಿದ್ದವನು ಕಳೆದುಕೊಂಡಿದ್ದು ಲಕ್ಷ ಲಕ್ಷ ಹಣ! 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News