ಮಂಗಳೂರು: ಬಜ್ಪೆಯ ಮಂಗಳೂರು ವಿಶೇಷ ಆರ್ಥಿಕ ವಲಯ(SEZ)ದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಮೀನು ಸ್ವಚ್ಛಗೊಳಿಸುವ‌ ಟ್ಯಾಂಕಿಗೆ ಬಿದ್ದು, ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತ ಏಪ್ರಿಲ್‌ 17ರಂದು ರಾತ್ರಿ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: "ಕತ್ತಲೆ ಮುಖವಾಡ - ಪರ್ಸಂಟೇಜ್ ಪಲ್ಲಕ್ಕಿಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಕಳಚಿ ಬೀಳಲಿದೆ"


ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಬಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್, ಶರಾಫತ್ ಅಲಿ, ಮೀರಾದುಲ್ಲ ಇಸ್ಲಾಂ ಎಂದು ಗುರುತಿಸಲಾಗಿದೆ.


ಎಂದಿನಂತೆ ಸ್ವಚ್ಛಗೊಳಿಸಿದ ಮೀನನ್ನು ಟ್ಯಾಂಕ್‌ನಿಂದ ಹೊರ ತೆಗೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೀನು ಸಂಸ್ಕರಣ ಫ್ಯಾಕ್ಟರಿಯನ್ನು ಬಂದ್ ಮಾಡಲಾಗಿದೆ.


ಇದನ್ನು ಓದಿ: ಸಂಪುಟ ತಿಂಗಳಾಂತ್ಯಕ್ಕೆ ವಿಸ್ತರಣೆ ಸಾಧ್ಯತೆ..?


ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, "ಮೀನು ಸ್ವಚ್ಛಗೊಳಿಸಲು ಬಳಸುತ್ತಿದ್ದ ತೊಟ್ಟಿಗೆ ಮೊದಲು ಒಬ್ಬ ಬಿದ್ದಿದ್ದು, ಆತನ ರಕ್ಷಣೆಗೆಂದು ತೆರಳಿದ ಉಳಿದವರು ಸಹ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಮೂವರನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರು ಮೃತಪಟ್ಟಿದ್ದಾರೆ" ಎಂದು ಹೇಳಿದರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.