Food Poison: ಕೇಕ್ ತಿಂದ ಬಳಿಕ ಫುಡ್​ ಪಾಯ್ಸನ್‌ನಿಂದ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿನಗರದಲ್ಲಿ ನಡೆದಿದೆ. ಧೀರಜ್ ಸಾವನ್ನಪ್ಪಿದ್ದು, ಆತನ ತಂದೆ ಬಾಲರಾಜ್ ಹಾಗೂ ತಾಯಿ ನಾಗಲಕ್ಷ್ಮೀ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಸ್ವಿಗ್ಗಿ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ ಬಾಲರಾಜ್​ಗೆ ಭಾನುವಾರ(ಅ.6) ಸಂಜೆ ಕೇಕ್​ ಆರ್ಡರ್ ಬಂದಿತ್ತು. ಬೇಕರಿಯಿಂದ ಕೇಕ್ ತೆಗೆದುಕೊಂಡು ಹೋಗುವಷ್ಟರಲ್ಲಿ ಆರ್ಡರ್ ಕ್ಯಾನ್ಸಲ್ ಆಗಿದೆ. ಈ ಹಿನ್ನಲೆ ಬಾಲರಾಜ್​ ತಮ್ಮ ಮನೆಗೆ ಆ ಕೇಕ್ ತೆಗೆದುಕೊಂಡು ಹೋಗಿದ್ದರಂತೆ. ಬಳಿಕ ಇಡೀ ಕುಟುಂಬ ಆ ಕೇಕ್‌ಅನ್ನು ಸೇವಿಸಿದ್ದರಂತೆ. ಕೇಕ್ ತಿಂದ ಬಳಿಕ ಮಗು, ಪೋಷಕರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 


ಇದನ್ನೂ ಓದಿ: ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ: ಯಾವ ಪಕ್ಷದತ್ತ ಮತದಾರನ ಒಲವು?


ಸದ್ಯ ಘಟನೆ ಬಗ್ಗೆ ವಿವರ ನೀಡಬೇಕಾದ ತಂದೆ-ತಾಯಿ ಸಹ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಪೊಲೀಸರಿಗೆ ದೂರು ಕೊಡಲು ಅಥವಾ ಘಟನೆ ಹೇಗೆ ನಡೆದಿದೆ ಅನ್ನೋದರ ಬಗ್ಗೆ ಹೇಳಲು ಯಾರು ಇಲ್ಲ. ಇಬ್ಬರಿಗೂ ಪ್ರಜ್ಞೆ ಬಂದ ಬಳಿಕ ಘಟನೆ ಬೆಳಕಿಗೆ ಬರುವ ಸಾಧ್ಯತೆಯಿದೆ.


ಈ ಘಟನೆ ಕುರಿತು ಸ್ಪಷ್ಟನೆ ನೀಡಿರುವ ಕಿಮ್ಸ್​ ಆಸ್ಪತ್ರೆಯ ನಿರ್ದೇಶಕ ಡಾ.ಆಂಜಿನಪ್ಪ, ‘ಇದು ಫುಡ್​ ಪಾಯ್ಸನ್​ನಿಂದ ಆಗಿದ್ದು, ಆಸ್ಪತ್ರೆಗೆ ಬರುವ ಮೊದಲೇ 5 ವರ್ಷದ ಮಗು ಮೃತಪಟ್ಟಿದೆ. ಈ ಕುರಿತು ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಲಾಗಿದೆ. ಮಗುವಿನ ಸಾವಿಗೆ ನಿಖರ ಕಾರಣ ವರದಿಯಲ್ಲಿ ತಿಳಿಯಬೇಕಿದೆ. ಯಾವ ಕಾರಣವೆಂದು ರಿಪೋರ್ಟ್ ನೋಡಿದ ಬಳಿಕ ಹೇಳುತ್ತೇವೆ. ಸದ್ಯ ಇದು ಫುಡ್ ಪಾಯ್ಸ್‌ನಿಂದ ಆಗಿರುವು ಅಂತಾ ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಮೃತ ಮಗುವಿನ ತಂದೆ-ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆʼ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ದಸರಾ ಉದ್ಘಾಟನೆ ವೇಳೆ ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್: ಎಚ್‌ಡಿ‌ಕೆ ರಾಜೀನಾಮೆ ಕೊಡ್ತಾರಾ..! 


ಬಾಲರಾಜ್ ಮತ್ತು ನಾಗಲಕ್ಷ್ಮೀ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಒಟ್ಟು ನಾಲ್ಕು ಜನ ವಾಸವಿದ್ದರು. ಅಜ್ಜಿ ಮನೆಗೆ ಹೆಣ್ಣು ಮಗುವನ್ನು ಕಳುಹಿಸಲಾಗಿತ್ತು. ಭಾನುವಾರ ರಾತ್ರಿ ಮೂವರು ಊಟ ಮಾಡಿದ ಬಳಿಕ ಕೇಕ್ ಸೇವಿಸಿದ್ದರಂತೆ. ಬೆಳಗಾಗುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.​ ಸದ್ಯ ಮೆಡಿಕಲ್ ರಿಪೋರ್ಟ್​ಗಾಗಿ ಪೊಲೀಸರು ಕಾಯುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.