ಚಾಮರಾಜನಗರ: ಬಿಜೆಪಿ MLC, ಮಾಜಿ ಸಚಿವ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಅವರ ಶವ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರದಲ್ಲಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.


COMMERCIAL BREAK
SCROLL TO CONTINUE READING

ಮಹದೇವಯ್ಯ ನಾಪತ್ತೆಯಾಗಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನದ ಮೊದಲ ದಿನವೇ ರೈತ ಸಂಘದ ಪ್ರತಿಭಟನೆ


ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.  


ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.  


ಇದನ್ನೂ ಓದಿ: ಇಂದಿನಿಂದ ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಸಜ್ಜು 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.