ಬೆಂಗಳೂರು : ಮಣಿಪುರ ಮೂಲದ 25 ವರ್ಷದ ಮಹಿಳೆಯೊಬ್ಬರಿಗೆ ನಾಲ್ವರು ಅಪ್ರಾಪ್ತ ಯುವಕರು ಸೇರಿ ಕಿರುಕುಳ ನೀಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೋರಮಂಗಲದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ  ಘಟನೆ ನಡೆದಿದೆ. ಮಹಿಳೆಯ ನೆರವಿಗೆ ಧಾವಿಸಿದ ಸ್ನೇಹಿತನ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಹಿಳೆ ಮತ್ತು ಆಕೆಯ ಸ್ನೇಹಿತನ ನೆರವಿಗೆ ಧಾವಿಸಿದ ದಾರಿಹೋಕರು ನಾಲ್ವರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಉಳಿದ ಮೂವರನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲಾಗಿದೆ. 


COMMERCIAL BREAK
SCROLL TO CONTINUE READING

ಮಹಿಳೆಗೆ ಕಿರುಕುಳ ನೀಡಿದ ನಾಲ್ಕು ಮಂದಿ ಯುವಕರು 16 ರಿಂದ 17 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತರಾಗಿದ್ದರಿಂದ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡು ಮನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ತನಿಖೆಯ  ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 


ಇದನ್ನೂ ಓದಿ : ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ್ದ ದಂಪತಿ ಬಂಧನ..!


ಐಪಿಸಿ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ನಗರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ರಾತ್ರಿ 1.30 ರ ಸುಮಾರಿಗೆ ತ್ಯಾಜ್ಯವನ್ನು ವಿಲೇವಾರಿ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.


ಕಟ್ಟಡವೊಂದರ ಮುಂದೆ ಅಡ್ಡಾಡುತ್ತಿದ್ದ ಹುಡುಗರು ಆಕೆಗೆ ಕಿರುಕುಳ ನೀಡುತ್ತಿದ್ದಂತೆ, ಆಕೆ ಅವರನ್ನು ದೂರ ತಳ್ಳಿ ಕಿರುಚಾಡಿದ್ದಾರೆ. ನಂತರ ನಾಲ್ವರು ಹುಡುಗರು ಮಹಿಳೆಯ ಮುಖಕ್ಕೆ ಹೊಡೆದಿದ್ದಾರೆ. ಇದರಿಂದಾಗಿ ಮಹಿಳೆಯ  ಮೂಗು ಮತ್ತು ಬಾಯಿಯಿಂದ ರಕ್ತಸ್ರಾವವಾಗಲು ಪ್ರಾರಂಭವಾಗಿದೆ. ಆಕೆಯನ್ನು ರಕ್ಷಿಸಲು ಯತ್ನಿಸಿದಾಗ ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಲಾಯಿತು ಎಂದು  ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ : ಅಕ್ರಮ ಸಂಬಂಧ ಶಂಕೆ : ಪತ್ನಿಯ ಕತ್ತು ಸೀಳಿದ ಪತಿರಾಯ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.