ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಯುವಕರು ಸಾವು!

Road Accident in Haveri: ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್​ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್​​ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. 

Written by - Puttaraj K Alur | Last Updated : Jul 13, 2024, 11:09 PM IST
  • ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು
  • ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿರುವ ಘಟನೆ
  • ದುರ್ಘಟನೆಯಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಯುವಕರು ಸಾವು! title=
ಕಾರು ಅಪಘಾತಕ್ಕೆ ನಾಲ್ವರು ಬಲಿ!

Haveri Road Accident: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ಶನಿವಾರ ಬೆಳಗ್ಗೆ ಈ ಆಘಾತಕಾರಿ ಘಟನೆ ನಡೆದಿದೆ.

ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18) ಸ್ಥಳದಲ್ಲೇ ಮೃತಪಟ್ಟರೆ, ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳು ಅಂತಾ ತಿಳಿದುಬಂದಿದೆ.   

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ವಿಚಾರ

ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್​ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್​​ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. 

ಅಪಘಾತದ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಶಿಗ್ಗಾಂವಿ ಪೊಲೀಸರು ರಕ್ಷಣಾ ಕಾರ್ಯಚರಣೆ ನಡೆಸಿದರು. ಗಂಭೀರವಾಗಿ ಗಾಯಗೊಂಡಿದ್ದ ಗಾಯಳನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಹ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಕುಮಾರಸ್ವಾಮಿ ಅವರಿಂದ ಮುಡಾ ಅಕ್ರಮವಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದ ಬಿಎಸ್ವೈ-ರಮೇಶ್ ಬಾಬು ಆರೋಪ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News