ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ಸ್ನೇಹಿತರಿಂದಲೇ ಯುವತಿರ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಸೇರಿ ಪಾರ್ಟಿ ಆಯೋಜಿಸಿದ್ದರು. ಕಾಶ್ಮೀರ ಮೂಲದ ಓರ್ವ ಯುವತಿ ಮತ್ತು ಇಬ್ಬರು ಉತ್ತರ ಭಾರತ ಮೂಲದ ಯುವಕರು ಪಾರ್ಟಿಗೆ ಪ್ಲಾನ್ ಮಾಡಿದ್ದರು. ಈ ವೇಳೆ ಕುಡಿದ ನಶೆಯಲ್ಲಿ ಇಬ್ಬರೂ ಆರೋಪಿಗಳು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಲಾಗಿದೆ.
ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಹೇಳಿಕೆ; ‘ಕಮಲ’ ನಾಯಕರಲ್ಲಿ ತಲ್ಲಣ!
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಆರೋಪಿ ಯುವಕರು ಮತ್ತು ಸಂತ್ರಸ್ತ ಯುವತಿಯರು ಕೆಲಸ ಮಾಡುತ್ತಿದ್ದರು. ಒಂದೇ ಯೂನಿರ್ವಸಿಯಲ್ಲಿ ಓದಿದ್ದ ಸ್ನೇಹಿತರಾಗಿದ್ದರಿಂದ ಇದೇ ಸಲುಗೆ ಮೇಲೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.
ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.