ಬೆಂಗಳೂರು : 7 ವರ್ಷದ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬಾಲಕಿ ಮೇಲೆ ಅಟ್ಟಹಾಸ ಮೆರೆದ ಆರೋಪದಡಿ 74 ವರ್ಷದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಹಫೀಜ್ ನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: IBPS SO 2023 ನೇಮಕಾತಿ : 1402 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆರೋಪಿ ಹಫೀಜ್ ಶಿವಾಜಿನಗರ ವ್ಯಾಪ್ತಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಿದ್ದು, ಮೂರಂಸ್ತಿನ ಕಟ್ಟಡ ಹೊಂದಿದ್ದ. ಕಳೆದ 17 ದಿನಗಳ ಹಿಂದೆ ಅದೇ ಕಟ್ಟಡದ ಒಂದು ಭಾಗದಲ್ಲಿ ಬಾಲಕಿಯ ಕುಟುಂಬ ಬಾಡಿಗೆಗೆ ಬಂದಿತ್ತು. ಭಾನುವಾರ ಆಟವಾಡುತ್ತಾ ಹಫೀಜ್ ಮನೆಗೆ ಬಂದಿದ್ದಾಳೆ. ಈ ಸಮಯವನ್ನೇ ದುರುಪಯೋಗ ಮಾಡಿಕೊಂಡ ಆರೋಪಿ ಬಾಲಕಿಗೆ ಮುತ್ತಿಟ್ಟು ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ನಂತರ ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಹೊಡೆಯುವುದಾಗಿ ಬೆದರಿಸಿದ್ದಾನೆ. ಘಟನೆ ನಂತರ ಬಾಲಕಿ ಮನೆಗೆ ತೆರಳಿದಾಗ ನೋವಿನಿಂದ ಬಳಲುತ್ತಿದ್ದುದನ್ನ ಕುಟುಂಬದವರು ಗಮನಿಸಿದ್ದಾರೆ. ಈ ವೇಳೆ ಬಾಲಕಿ ಆರೋಪಿಯ ಕೃತ್ಯದ ಬಗ್ಗೆ ತಮ್ಮ ತಾಯಿಯ ಬಳಿ ತಿಳಿಸಿದ್ದಾಳೆ. ತಕ್ಷಣ ನೊಂದ ಬಾಲಕಿಯ ಕುಟುಂಬಸ್ಥರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂತರ ಬಾಲಕಿಯ ಕಡೆಯವರು, ಅಕ್ಕಪಕ್ಕದ ನಿವಾಸಿಗಳು ಆರೋಪಿಯ ಮನೆ ಮುಂದೆ ಜಮಾಯಿಸಿದ್ದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ದೇಶದ ಹಣ ಲೂಟಿ ಹೊಡೆಯುವ ಚಿಂತೆ: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.