ಬೆಂಗಳೂರು: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಬಿದ್ದು ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.


COMMERCIAL BREAK
SCROLL TO CONTINUE READING

ರಾಮಚಂದ್ರಪುರದ ನಿವಾಸಿ ನಿಶ್ಚಿತಾ (9) ಮೃತಪಟ್ಟಿರುವ ವಿದ್ಯಾರ್ಥಿನಿ ನಿಶ್ಚಿತಾ ಶುಕ್ರವಾರ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಕೆಳಕ್ಕೆೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಇದನ್ನು ಗಮನಿಸಿದ ಶಿಕ್ಷಕರು ಕೂಡಲೇ ಬಾಲಕಿಯನ್ನು ಆಸ್ಪತ್ರೆೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ. 


ಇದನ್ನೂ ಓದಿ : 7th Pay Commission : ಕೇಂದ್ರ ನೌಕರರಿಗೆ ಸರ್ಕಾರದಿಂದ ಮತ್ತೊಂದು ಬಿಗ್ ನ್ಯೂಸ್!


ವಿಚಾರ ತಿಳಿದು ಸ್ಥಳಕ್ಕೆೆ ದೌಡಾಯಿಸಿದ ಗಂಗಮ್ಮನಗುಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಮರಣೋತ್ತರ ಪರೀಕ್ಷೆೆ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇನ್ನೂ ಬಾಲಕಿಯ ಸಾವಿನ ಹಿನ್ನೆಲೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.