ಚಾಮರಾಜನಗರ: ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯ ಆದೇಶ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್; ಎಸ್.ಪಿ ಕೊಟ್ಟ ಎಚ್ಚರಿಕೆ ಏನು ಗೊತ್ತಾ..?


ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ  ರಂಗಸ್ವಾಮಿ(21) ಶಿಕ್ಷೆಗೊಳಗಾದ ಅಪರಾಧಿ.‌ ವಾರಿಗೆಯಲ್ಲಿ ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ  ದೈಹಿಕ ಸಂಪರ್ಕ ನಡೆಸಿದ್ದನು.


ಈ ಸಂಬಂಧ 2020 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾರ್ಚ್ ಶೀಟ್ ಸಲ್ಲಿಕೆಯಾಗಿತ್ತು. ಯುವಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ನಿಶಾರಾಣಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ 40 ಸಾವಿರ ದಂಡ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 4 ಲಕ್ಷ ಪರಿಹಾರ ಕೊಡಬೇಕೆಂದು ನ್ಯಾಯಾಧೀಶರು ನಿರ್ದೇಶನ ಕೊಟ್ಟಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದ ಮಂಡಿಸಿದ್ದರು.


ಇದನ್ನೂ ಓದಿ: ಹೆಚ್‌ಡಿಕೆ ಬಳಿ ಪೆನ್‌ಡ್ರೈವ್ ಇಲ್ಲಾ.. ಅದು ಠುಸ್ ಪಟಾಕಿ..! ಮಾಜಿ ಸಿಎಂ ವೀರಪ್ಪ ಮೊಯ್ಲಿ ಟಾಂಗ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.