Haryana INLD ಪಕ್ಷದ ಅಧ್ಯಕ್ಷ ನಫೆ ಸಿಂಗ್ ರಾಠಿ ಗುಂಡಿಟ್ಟು ಹತ್ಯೆ, ಮೂವರು ಅಂಗರಕ್ಷಕರಿಗೆ ಗಾಯ
Crime News: ಹರ್ಯಾಣಾದ ಐಎನ್‌ಎಲ್‌ಡಿ ರಾಜ್ಯಾಧ್ಯಕ್ಷ ಹಾಗೂ ಬಹದ್ದೂರ್‌ಗಢದ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಜಜ್ಜರ್‌ನ ಬರಾಹಿ ಗೇಟ್ ಬಳಿ ಅವರ ಮೇಲೆ ಈ ದಾಳಿ ನಡೆದಿದೆ. (Crime News In Kannada)
Haryana ಐಎನ್‌ಎಲ್‌ಡಿ pakshada ರಾಜ್ಯಾಧ್ಯಕ್ಷ ಹಾಗೂ ಬಹದ್ದೂರ್‌ಗಢದ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಹರಿಯಾಣದ ಜಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಜ್ಜರ್‌ನ ಬರಾಹಿ ಗೇಟ್ ಬಳಿ ಅವರ ಮೇಲೆ ಈ ದಾಳಿ ನಡೆದಿದೆ. ಐ-10 ವಾಹನದಲ್ಲಿ ಬಂದ ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು, ನಫೆಸಿಂಗ್ ರಾಠಿ ಸೇರಿದಂತೆ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯ ಬಳಿಕ ರಾಠಿ ಹಾಗೂ ಅವರ ಒಬ್ಬ ಅಂಗರಕ್ಷಕ ಮೃತಪಟ್ಟಿದ್ದಾರೆ.(Crime News In Kannada)
ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದಾಗ ಬಹದ್ದೂರ್‌ಗಢ ಬಳಿ ದಾಳಿ
ದಾಳಿಯ ಕುರಿತು ಮಾಹಿತಿ ನೀಡಿರುವ ಐಎನ್‌ಎಲ್‌ಡಿ ಪಕ್ಷದ ಹಿರಿಯ ಮುಖಂಡರೊಬ್ಬರು, ಅಪರಿಚಿತ ದುಷ್ಕರ್ಮಿಗಳು ಭಾನುವಾರ ಜಜ್ಜರ್ ಜಿಲ್ಲೆಯಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಹೇಳಿದ್ದಾರೆ. ಮಾಜಿ ಶಾಸಕ ರಾಠಿ ಅವರು ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದಾಗ ಜಜ್ಜರ್‌ನ ಬಹದ್ದೂರ್‌ಗಢ ಪಟ್ಟಣದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ಘಟನೆಗೆ ಅಂತ್ಯಹಾಡಿದ್ದಾರೆ ಎನ್ನಲಾಗಿದೆ.
ಭದ್ರತೆ ಒದಗಿಸಲು ಸರ್ಕಾರ ವಿಫಲ ಎಂದ ಅಭಯ್ ಚೌತಾಲಾ
ದಾಳಿಯ ಕುರಿತು ಮಾತನಾಡಿರುವ ಐಎನ್‌ಎಲ್‌ಡಿ ಪಕ್ಷದ ಮುಖಂಡ ಅಭಯ್ ಚೌತಾಲಾ ಅವರು ಜಜ್ಜರ್ ಜಿಲ್ಲೆಯಲ್ಲಿ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದಿದ್ದಾರೆ. ರಾಠಿ ಅವರಿಗೆ ಜೀವ ಬೆದರಿಕೆ ಇದ್ದರೂ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ-ಏಕಾಏಕಿ ಮೂವ್ ಆದ ಕಾರು: ಪಾರ್ಕಿಂಗ್ ನಲ್ಲಿ ಆಟವಾಡುತ್ತಿದ್ದ 7 ರ ಬಾಲಕಿ ಸಾವು
ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು
ಹರಿಯಾಣದ ಐಎನ್‌ಎಲ್‌ಡಿ ಮುಖ್ಯಸ್ಥ ನಫೆ ಸಿಂಗ್ ರಾಠಿ ಮೇಲಿನ ದಾಳಿಯ ಕುರಿತು ಜಜ್ಜರ್ ಎಸ್‌ಪಿ ಅರ್ಪಿತ್ ಜೈನ್ ಅಧಿಕೃತ ಹೇಳಿಕೆ ನೀಡಿದ್ದು. 'ಗುಂಡು ಹಾರಿಸಿದ ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದಿದೆ. ಸಿಐಎ ಮತ್ತು ಎಸ್‌ಟಿಎಫ್ ತಂಡಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು...' ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-ಯುಪಿಯಲ್ಲಿ ಘೋರ ದುರಂತ: ಕೆರೆಗೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 22 ಮಂದಿ ದುರ್ಮರಣ..!
ಸರ್ಕಾರವನ್ನು ಗುರಿಯಾಗಿಸಿದ ಭೂಪೇಂದ್ರ ಸಿಂಗ್ ಹೂಡಾ
ಹಗಲು ಹೊತ್ತಿನಲ್ಲಿ ಐಎನ್‌ಎಲ್‌ಡಿ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಪ್ರತಿಪಕ್ಷಗಳು ಮುಖಂಡರು, ಹರ್ಯಾಣಾದ ಸರ್ಕಾರವನ್ನು ಗುರಿಯಾಗಿಸಲಾರಂಭಿಸಿವೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ, 'ಹರಿಯಾಣದಲ್ಲಿ ಐಎನ್‌ಎಲ್‌ಡಿ ರಾಜ್ಯಾಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಸುದ್ದಿ ಖೇದಕರವಾಗಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಕಾನೂನು ಸುವ್ಯವಸ್ಥೆ ದಿವಾಳಿಯಾಗಿದೆ ಎಂಬುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಇಂದು ರಾಜ್ಯದಲ್ಲಿ ಯಾರೂ ಸುರಕ್ಷಿತರಾಗಿಲ್ಲ. ಅಗಲಿದ ಆತ್ಮಕ್ಕೆ ನನ್ನ ಶ್ರದ್ಧಾಂಜಲಿ ಮತ್ತು ಕುಟುಂಬಕ್ಕೆ ಆಳವಾದ ಸಂತಾಪ. ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ