Hathras Tragedy: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 120ಕ್ಕೂ ಹೆಚ್ಚು ಮಂದಿ ಬಲಿ!

UP Hathras tragedy: ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Written by - Puttaraj K Alur | Last Updated : Jul 2, 2024, 07:32 PM IST
  • ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದೆ
  • ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ 120ಕ್ಕೂ ಹೆಚ್ಚು ಮಂದಿ ಬಲಿ
  • 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕ
Hathras Tragedy: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 120ಕ್ಕೂ ಹೆಚ್ಚು ಮಂದಿ ಬಲಿ! title=
120ಕ್ಕೂ ಹೆಚ್ಚು ಮಂದಿ ಬಲಿ!

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ಮಹಿಳೆಯರಾಗಿದ್ದು, ಅನೇಕ ಮಕ್ಕಳು ಸಹ ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆಂದು ವರದಿಯಾಗಿದೆ.

ಹತ್ರಾಸ್‌ ಜಿಲ್ಲೆಯಿಂದ 47 ಕಿಮೀ ದೂರದಲ್ಲಿರುವ ಗ್ರಾಮದಲ್ಲಿ ಆಯೋಜಿಸಿದ್ದ ಭೋಲೆ ಬಾಬಾರ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ದುರಂತ ನಡೆದಿದೆ. ಶಿವನ ಆರಾಧನೆಗಾಗಿ ಸತ್ಸಂಗ ಏರ್ಪಡಿಸಲಾಗಿತ್ತು. ಭಕ್ತರ ಅನುಕೂಲಕ್ಕಾಗಿ ವಿಶಾಲ ಬಯಲಿನಲ್ಲಿ ವಿಶಾಲವಾದ ಟೆಂಟ್ ಹಾಕಲಾಗಿತ್ತು. ನೂರಾರು ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಾಲ್ತುಳಿತದಿಂದ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ

ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧಾರ್ಮಿಕ ಗುರುವೊಬ್ಬರು ಭಾಷಣ ಮಾಡುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿದೆ. ಬಯಲಿನಲ್ಲಿ ಹಾಕಲಾಗಿದ್ದ ಟೆಂಟ್‌ನೊಳಗೆ ಗಾಳಿಯಾಡಲು ಎಲ್ಲಿಯೂ ರಂಧ್ರಗಳನ್ನು ಬಿಟ್ಟಿರಲಿಲ್ಲ. ಹೀಗಾಗಿ ವಿಶಾಲ ಟೆಂಟ್‌ನೊಳಗೆ ನೂರಾರು ಜನರು ಪ್ರವೇಶಿಸಿದ ಕೆಲವೇ ನಿಮಿಷಗಳಲ್ಲಿ ಆಮ್ಲಜನಕದ ಕೊರತೆಯುಂಟಾಗಿ ಕಾಲ್ತುಳಿತ ಉಂಟಾಗಿದೆ ಎಂದು ಹೇಳಲಾಗಿದೆ. 

ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗ್ರಾದ ಎಡಿಜಿ ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಹತ್ರಾಸ್‌ ಜಿಲ್ಲೆಯಲ್ಲಿ ನಡೆದಿರುವ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಇದನ್ನೂ ಓದಿ: RBI ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅರ್ನಾಬ್ ಕುಮಾರ್ ಚೌಧುರಿ ನೇಮಕ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News