ಬೆಂಗಳೂರು: ರಾಜಕಾರಣಿಗಳ ಹನಿಟ್ರ್ಯಾಪ್ ಸುದ್ದಿ ಇತ್ತೀಚೆಗಷ್ಟೇ ಬಹುದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಈ ನಡುವೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಖಾಸಗಿ ಪ್ರೀಸ್ಕೂಲ್ ಶಿಕ್ಷಕಿಯೊಬ್ಬರ ಪ್ರೇಮ ಕಹಾನಿ ಜನರನ್ನು ಅಚ್ಚರಿ ಪಡಿಸಿದೆ. ಪ್ರಿ ಸ್ಕೂಲ್‌ಗೆ ಬರುತ್ತಿದ್ದ ಮಕ್ಕಳ ಪೋಷಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಬಿಂಕದ ನಾರಿ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಯ ಪೋಷಕನಿಗೆ ಮುತ್ತು ಕೊಟ್ಟು 50 ಸಾವಿರ ರೂಪಾಯಿ ಪೀಕಿದ್ದಾಳೆ. ರಿಲೇಷನ್‌ಶಿಪ್‌ನಲ್ಲಿ ಇರುವುದಾಗಿ ಲಕ್ಷಾಂತರ ರೂಪಾಯಿ ಹಣವನ್ನು ವಂಚಿಸಿದ್ದಾಳೆ.
ಶಿಕ್ಷಕಿ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಟೀಚರ್ ಶ್ರೀದೇವಿ, ಗಣೇಶ್ ಕಾಳೆ, ಸಾಗರ್ ಮೋರೆ ಬಂಧಿತ ಆರೋಪಿಗಳಾಗಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯವರಾದ ಮೂವರು ಆರೋಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನಲ್ಲಿ ಪ್ರೀಸ್ಕೂಲ್ (ಕಿಂಡರ್ಗಾಟನ್) ನಡೆಸುತ್ತಿದ್ದ ಆರೋಪಿತೆ ಶ್ರೀದೇವಿ ಅವರಿಗೆ ಮಗುವಿನ ಪೋಷಕ ರಾಕೇಶ್ ಪರಿಚಯವಾಗಿತ್ತು. 2023 ರಲ್ಲಿ ಈತನ ಪರಿಚಯವಾಗಿತ್ತು. ತನ್ನ ಮಕ್ಕಳನ್ನು ಶ್ರೀದೇವಿಯ ಪ್ಲೇ ಹೋಮ್ ಗೆ ಈ ವ್ಯಕ್ತಿ ಕಳಿಸುತ್ತಿದ್ದರು. ರಾಕೇಶ್ ನಿಂದ ಶ್ರೀದೇವಿ ಶಾಲೆ ನಿರ್ವಹಣೆ ಸಲುವಾಗಿ 2 ಲಕ್ಷ ಸಾಲ ಪಡೆದಿದ್ದರು. 2024 ರಲ್ಲಿ ಈ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದರು.
ಹಣ ವಾಪಸ್ ಕೇಳಿದಾಗ ಶಾಲೆ ಪಾರ್ಟ್ನರ್ ಆಗು ಎಂದಿದ್ದಳು. ಈ ವೇಳೆ ಇಬ್ಬರ ನಡುವೆ ಸಲುಗೆ ಬೆಳಸಿ ಸುತ್ತಾಟ ನಡೆಸಿದ್ದರು. ಶ್ರೀದೇವಿ ಜೊತೆ ಮಾತನಾಡಲು ಹೊಸ ಸಿಮ್ ಹಾಗೂ ಪೋನ್ ಖರೀದಿಸಿದ್ದರು. ಜನವರಿ ಮೊದಲ ವಾರದಲ್ಲಿ ಹಣ ವಾಪಸ್ ಕೇಳಿದ್ದರು.
ಇದನ್ನೂ ಓದಿ : Cylinder Price: ದೇಶದ ಜನರಿಗೆ ಗುಡ್ ನ್ಯೂಸ್! ತಿಂಗಳ ಆರಂಭದಲ್ಲೆ ಭಾರೀ ಕುಸಿತ ಕಂಡ ಅಡುಗೆ ಸಿಲಿಂಡರ್‌ನ ಬೆಲೆ
ಈ ವೇಳೆ ನಿನಗೆ ಏನು ಬೇಕು ಕೇಳು ಕೊಡುತ್ತೇನೆ. ಹಣಕಾಸಿನ ವ್ಯವಹಾರ ಒಂದೇ ಸಲ ಮುಗಿಸಿಬಿಡೋಣ ಎಂದಿದ್ದಳು. ನಂತರ ರಾಕೇಶ್ ಮನೆಗೆ ತೆರಳಿದ್ದ ಶ್ರೀದೇವಿ ಮುತ್ತಿಟ್ಟು ಐವತ್ತು ಸಾವಿರ ಪಡೆದಿದ್ದಳು. ಬಳಿಕ ನಿನ್ನ ಜೊತೆ ರಿಲೇಷನ್ ಶಿಪ್ ನಲ್ಲಿ ಇರುತ್ತೆನೆಂದು ಆಫರ್ ಕೊಟ್ಟಿದ್ದರು. ಈ ವೇಳೆ ಮತ್ತೆ 15 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಪದೆ ಪದೇ ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ದರಿಂದ ಸಿಮ್ ಮುರಿದು ಬಿಸಾಕಿದ್ದರಂತೆ ಎಂದು ರಾಕೇಶ್ ಹೇಳಿದ್ದಾರೆ.
ಮಾರ್ಚ್ 12 ರಂದು ರಾಕೇಶ್ ಪತ್ನಿಗೆ ಕರೆಮಾಡಿದ್ದರು. ಮಗುವಿನ ಸ್ಕೂಲ್ ಟಿಸಿ ಕೊಡುತ್ತೇನೆ ನಿಮ್ಮ ಪತಿಯನ್ನ ಕಳಿಸಿ ಎಂದಿದ್ದಳು. ಅದರಂತೆ ಶ್ರೀದೇವಿಯ ಪ್ರೀ ಸ್ಕೂಲ್ ಗೆ ತೆರಳಿದ್ದರು. ಪ್ರೀಸ್ಕೂಲ್ ನಲ್ಲಿ ಶ್ರೀದೇವಿ ಜೊತೆ ಹಾಜರಿದ್ದ ಇತರೆ ಆರೋಪಿಗಳಾದ ಸಾಗರ್ ಹಾಗೂ ಗಣೇಶ್ ಮಗುವಿನ ಪೋಷಕನಿಗೆ ಅವಾಜ್ ಹಾಕಿದ್ದರು.
ಸಾಗರ್ ಜೊತೆ ಶ್ರೀದೇವಿಗೆ ಎಂಗೇಜ್ಮೆಂಟ್ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡ್ತಿದ್ದೀಯ. ಈ ವಿಚಾರವನ್ನ ಶ್ರೀದೇವಿಯ ತಂದೆ ಹಾಗೂ ನಿನ್ನ ಹೆಂಡತಿಗೆ ತಿಳಿಸ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದರಂತೆ ಎಂದು ಆರೋಪಿಸಲಾಗಿದೆ.
ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡುತ್ತಿದ್ದಿ. ಯಾರಿಗೂ ವಿಚಾರ ಹೇಳಬಾರದು ಎಂದರೆ 1 ಕೋಟಿ ರೂ. ಕೊಡು ಎಂದು ಬ್ಲ್ಯಾಕ್ಮೇಲ್ ಮಾಡಿದ್ದರಂತೆ. ಕೊನೆಯದಾಗಿ ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರಂತೆ. 1.90 ಲಕ್ಷ ರೂ. ಹಣ ಪಡೆದು ಬಿಟ್ಟು ಕಳುಹಿಸಿದ್ದರಂತೆ. ಆದರೆ, ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎಂದು ರಾಕೇಶ್ ಆರೋಪಿಸಿದ್ದಾರೆ.
ಮಾರ್ಚ್ 17 ರಂದು ಮತ್ತೆ ರಾಕೇಶ್ ಗೆ ಕರೆ ಮಾಡುವ ಶ್ರೀದೇವಿ 15 ಲಕ್ಷ ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಟ್ಟರೇ ವಿಡಿಯೋ, ಚಾಟ್ ಡಿಲೀಟ್ ಮಾಡ್ತೀನಿ. ಇಲ್ಲವಾದರೆ ನಿನ್ನ ಪತ್ನಿಗೆ ತೋರಿಸಿ ನಿನ್ನ ಸಂಸಾರವನ್ನ ಹಾಳು ಮಾಡ್ತೀವೆಂದು ಬ್ಲಾಕ್ ಮೇಲ್ ಮಾಡಿದ್ದರಂತೆ.
ಬೆಂಗಳೂರು ಸಿಸಿಬಿಗೆ ದೂರು ರಾಕೇಶ್ ನೀಡಿದ್ದರು. ಸದ್ಯ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದಾರೆ.
ಇದನ್ನೂ ಓದಿ : ಮದುವೆಗೆ ಸಜ್ಜಾಗಿರುವ ಆಂಕರ್ ಅನುಶ್ರೀ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಗೊತ್ತಾ? ಈಕೆ ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ...
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









