Muzaffarpur fire Accident: ಬಿಹಾರದ ಮುಜಫರ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಭೀತಿಯನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಮುಜಫರ್ಪುರದ ಮೋತಿಪುರ ಮಾರುಕಟ್ಟೆಯಲ್ಲಿ ಈ ಭಯಾನಕ ಘಟನೆ ಸಂಭವಿಸಿದೆ. ಮನೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐದು ಜನರು ದುರಂತವಾಗಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ನಡೆದಾಗ ಕುಟುಂಬ ಸದಸ್ಯರು ನಿದ್ರಿಸುತ್ತಿದ್ದರು ಎಂದು ವರದಿಯಾಗಿದೆ. ಪರಿಣಾಮ ಅವರು ಬೆಂಕಿ ಅವಘಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Bihar Election Results 2025: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಗೆದ್ದಿದ್ದು ಹೇಗೆ ಗೊತ್ತೇ?
ಬೆಂಕಿಯ ಜ್ವಾಲೆಯನ್ನ ಕಂಡ ಸ್ಥಳೀಯರು ಕೂಡಲೇ ಸ್ಥಳದಲ್ಲಿ ಜನಸಮೂಹ ಜಮಾಯಿಸಿದರು. ಅನೇಕರು ಬೆಂಕಿಯನ್ನ ನಂದಿಸಲು ಪ್ರಯತ್ನಿಸಿದರು, ಆದರೆ ಬೆಂಕಿಯ ಜ್ವಾಲೆ ತುಂಬಾ ತೀವ್ರವಾಗಿದ್ದರಿಂದ ಅದನ್ನ ನಿಯಂತ್ರಿಸುವುದು ಕಷ್ಟಕರವಾಗಿತ್ತು. ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದವು. ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನ ನಿಯಂತ್ರಣಕ್ಕೆ ತರಲಾಯಿತು.
ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಐದು ಜನರನ್ನ ಪೊಲೀಸರು ರಕ್ಷಿಸಿ ಚಿಕಿತ್ಸೆಗಾಗಿ ಎಸ್‌ಕೆಎಂಸಿಎಚ್ ಆಸ್ಪತ್ರೆಗೆ ರವಾನಿಸಿದರೂ ಪ್ರಯೋಜನವಾಗಲಿಲ್ಲ. ಮೃತರನ್ನ ಲಾಲನ್ ಸಾಹ್, ಅವರ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಈ ಘಟನೆಯು ಇಡೀ ಪ್ರದೇಶವನ್ನೇ ಶೋಕದಲ್ಲಿ ಮುಳುಗಿಸಿದೆ.
ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ
ಮೋತಿಪುರದ ವಾರ್ಡ್ 13ನಲ್ಲಿರುವ ಗೆನಾ ಸಾಹ್ ಅವರ ಮನೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವೆಸ್ಟರ್ನ್ ಡಿಎಸ್ಪಿ ಸುಚಿತ್ರ ಕುಮಾರಿ ತಿಳಿಸಿದ್ದಾರೆ. ಬೆಂಕಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಜನರು ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ವಿಸ್ಕಿ, ಟಕಿಲಾ ಅಲ್ಲ.. ಇದೇ ನೋಡಿ ಜಗತ್ತಿನ ಅತ್ಯಂತ ಸ್ಟ್ರಾಂಗ್ ಆಲ್ಕೊಹಾಲ್! ಒಂದು ಪೆಗ್ ಕುಡಿದ್ರೆ ನೀವು ಮೇಲೆ ಎದ್ದೇಳಲ್ಲ
ಮನೆಯೊಳಗೆ ತೀವ್ರ ಸುಟ್ಟಗಾಯಗಳಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಐವರನ್ನ ರಕ್ಷಿಸಲಾಯಿತು. ಬೆಳಗಿನ ಜಾವ 4 ರಿಂದ 5 ಗಂಟೆಯ ನಡುವೆ ಕೊಠಡಿಯಿಂದ ಕಿರುಚಾಟ ಕೇಳಿ ಬಂದಾಗ ಕುಟುಂಬಕ್ಕೆ ಬೆಂಕಿಯ ಬಗ್ಗೆ ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.









