ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ!

HUBBALLI Murder Case: ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದ.

Written by - Puttaraj K Alur | Last Updated : Apr 14, 2025, 06:45 PM IST
  • ಐದು ವರ್ಷದ ಬಾಲಕಿಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಶಾಕಿಂಗ್‌ ಸತ್ಯ
  • ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢ
  • ಚಾಕೊಲೇಟ್ ಆಸೆ ತೋರಿಸಿ ಬಾಲಕಿಯನ್ನ ಎತ್ತಿಕೊಂಡು ಹೋಗಿದ್ದ ಆರೋಪಿ
ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ!

HUBBALLI Murder Case: ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಐದು ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಕಿಂಗ್‌ ಸತ್ಯ ಹೊರಬಿದ್ದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

Add Zee News as a Preferred Source

ಹುಬ್ಬಳ್ಳಿಯ ವಿಜಯನಗರದ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಬಿಹಾರ ಮೂಲದ ಆರೋಪಿ ರಿತೇಶ್‌ ಕುಮಾರ್‌ ಚಾಕೊಲೇಟ್ ಆಸೆ ತೋರಿಸಿದ್ದ. ಗೇಟ್‌ ಮೇಲೆ ಹತ್ತಿ ಬಾಲಕಿಯನ್ನು ಎತ್ತಿಕೊಂಡು ಹೋಗಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ್ದಾನೆ.  ಆರೋಪಿ ರಿತೇಶ್‌ ಕುಮಾರ್‌ ಬಾಲಕಿಯ ಲೆಗ್ಗಿನ್ಸ್ ಅನ್ನ ತನ್ನ ಒಳ ಉಡುಪಿನಲ್ಲಿ ಇಟ್ಟುಕೊಂಡು ವಿಕೃತ ಕಾಮಿಯಂತೆ ವರ್ತಿಸಿದ್ದಾನೆಂದು ತಿಳಿದುಬಂದಿದೆ. ಬಾಲಕಿಯ ಮರಣೋತ್ತರ ಪರೀಕ್ಷಾ ವರದಿ ಇನ್ನಷ್ಟೇ ಅಧಿಕೃತವಾಗಿ ಹೊರಬರಬೇಕಿದೆ.

ಇದನ್ನೂ ಓದಿ: ಕುಟುಂಬದವರ ವಿರುದ್ಧವಾಗಿ ಮದುವೆಯಾದ್ರೆ ಆಸ್ತಿಯಲ್ಲಿ ಪಾಲುದಾರರಾಗುವುದಿಲ್ಲವೇ? ಕಾನೂನು ಹೇಳುವುದೇನು?  

ಮೃತ ಬಾಲಕಿಯ ಹೆತ್ತವರು ಕೂಲಿ ಕಾರ್ಮಿಕರು. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದರು. ಮೃತ ಬಾಲಕಿಯ ತಾಯಿ ರವಿವಾರ (ಏ.13) ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದರು. ಈ ವೇಳೆ ತಾಯಿ ಜೊತೆ ಬಾಲಕಿ ಸಹ ಹೋಗಿದ್ದಳು. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.

ಮನೆಯ ಗೇಟ್‌ ಬಳಿ ಬಂದು ಬಾಲಕಿಯನ್ನು ಆರೋಪಿ ರಿತೇಶ್‌ ಕುಮಾರ್‌ ಎತ್ತಿಕೊಂಡು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಪೊಲೀಸರು ಆರೋಪಿ ವಿರುದ್ಧ POCSO, ಅಪಹರಣ ಮತ್ತು ಕೊಲೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತನನ್ನು ಹಿಡಿಯಲು ಯತ್ನಿಸಿದಾಗ ಪೊಲೀಸರ ಮೇಲೆಯೇ ಆರೋಪಿ ದಾಳಿ ನಡೆಸಿದ್ದಾನೆ. ಈ ವೇಳೆ ಸ್ವಯಂ ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದರು. ಕೂಡಲೇ ಆರೋಪಿಯನ್ನ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ ಆತ ಸಾವನ್ನಪ್ಪಿದ್ದ.

ಇದನ್ನೂ ಓದಿ: ಚುನಾವಣೆಯಲ್ಲಿ ಶೇ.50ರಷ್ಟು ಮುಸ್ಲಿಂ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಿ: ಪ್ರಧಾನಿ ಮೋದಿ

ಆರೋಪಿ ಗುಂಡೇಟಿಗೆ ಬಲಿಯಾಗಿದ್ದಾನೆ. ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಅದರ ಜೊತೆಗೆ ಬಾಲಕಿಯ ಕುಟುಂಬಸ್ಥರಿಗೆ ಸ್ಲಂ ಬೋರ್ಡ್‌ನಿಂದ ಒಂದು ಮನೆ ನೀಡಲು ಕೂಡ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News