Hubballi Crime News: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನ ಅಪಹರಿಸಿ ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಪೊಲೀಸರ ಗುಂಡಿಗೆ ಬಲಿಯಾದ ಆರೋಪಿ. ಹುಬ್ಬಳ್ಳಿಯ ವಿಜಯನಗರದ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ಚಾಕೊಲೇಟ್ ಆಸೆ ತೋರಿಸಿದ್ದ. ಆರೋಪಿ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತ ಬಾಲಕಿಯ ಹೆತ್ತವರು ಕೂಲಿ ಕಾರ್ಮಿಕರು. ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದರು. ಮೃತ ಬಾಲಕಿಯ ತಾಯಿ ರವಿವಾರ (ಏ.13) ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದರು. ಈ ವೇಳೆ ತಾಯಿ ಜೊತೆ ಬಾಲಕಿ ಸಹ ಹೋಗಿದ್ದಳು. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ಆರೋಪಿ ರಿತೇಶ್ ಕುಮಾರ್ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು
ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿ ರಿತೇಶ್ ಕುಮಾರ್ ಮನೆಯ ಗೇಟ್ ಬಳಿ ಬಂದು ಅಡ್ಡಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕಿಯನ್ನ ಗಮನಿಸಿದ ಆರೋಪಿ ಗೇಟ್ ಬಳಿ ಬಂದು ಆಕೆಯನ್ನು ಕರೆದಿದ್ದಾನೆ. ಗೇಟ್ ಹಾಕಿದ್ದರಿಂದ ಆತ ಅಲ್ಲಿಂದಲೇ ಬಾಲಕಿಯನ್ನು ಎತ್ತಿಕೊಂಡು ಹೋಗಲು ಪ್ರಯತ್ನಿಸಿದ್ದಾನೆ. ನಂತರ ಗೇಟ್ ಮೇಲೆ ಹತ್ತಿ ಬಾಲಕಿಯನ್ನು ಎತ್ತಿಕೊಂಡು ಓಡಿ ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಬಾಲಕಿಯ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಬಾಲಕಿಯ ಪೋಷಕರಿಂದ ಮಾಹಿತಿ ಪಡೆದುಕೊಂಡರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









