ಹುಬ್ಬಳ್ಳಿ ಸಿಸಿಬಿ ಪೋಲೀಸರ ಭರ್ಜರಿ ಬೇಟೆ: ಎಂಡಿಎಂಎ ಡ್ರಗ್ಸ್ ಮಾರಾಟ ಜಾಲದ ಮೂವರ ಬಂಧನ

Crime News: ಹುಬ್ಬಳ್ಳಿ ಗಾಂಧಿವಾಡದ ಅನಫಲ್ ಅಬ್ದುಲ್ ಅಜೀಜ್, ಆಕಾಶಪಾರ್ಕ ನ ವಿಕ್ರಮ್ ಚೌಧರಿ, ನವನಗರದ ದಾವಲ್ ಮಲಿಕ್ ನದಾಫ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1,38,450 ರೂ. ಮೌಲ್ಯದ 0.923 ಗ್ರಾಂ ತೂಕದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 

Written by - Yashaswini V | Last Updated : Mar 21, 2024, 12:46 PM IST
  • ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳು
  • ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಭಾಗದ ಎಸಿಪಿ ಎಸ್.ಟಿ.ಒಡೆಯರ್ ನೇತೃತ್ವದಲ್ಲಿ ದಾಳಿ
  • ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
ಹುಬ್ಬಳ್ಳಿ ಸಿಸಿಬಿ ಪೋಲೀಸರ ಭರ್ಜರಿ ಬೇಟೆ:  ಎಂಡಿಎಂಎ ಡ್ರಗ್ಸ್ ಮಾರಾಟ ಜಾಲದ ಮೂವರ ಬಂಧನ  title=

Crime News Kannada: ಹುಬ್ಬಳ್ಳಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ 11.57 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಆಜಾದ್ ನಗರದಲ್ಲಿ ನಡೆದಿದೆ. 

ಹೈಟೆಕ್ ಡ್ರಗ್ಸ್‌ ಮಾರಾಟ ಯತ್ನ ವಿಫಲ:
ಈ ಮೂವರು ಬಂಧಿತ ಆರೋಪಿಗಳು ಕಾರಿನಲ್ಲಿ ಬಂದು ಎಂಡಿಎಂಎ ಎಂಬ ಹೈಟೆಕ್ ಡ್ರಗ್ಸ್‌ ನ್ನು ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಈ ಕುರಿತಂತೆ ಮಾಹಿತಿ ಪಡೆದು ಆರೋಪಿಗಳಿಗಾಗಿ ಬಾಳೆ ಬೀಸಿದ್ದ ಹುಬ್ಬಳ್ಳಿ ಸಿಸಿಬಿ ಪೊಲೀಸರು,  ಆರೋಪಿಗಳನ್ನು ಬಂಧಿಸಿ ಡ್ರಗ್ಸ್ ಮಾರಾಟ ಯತ್ನವನ್ನು ವಿಫಲಗೊಳಿಸಿದ್ದಾರೆ. 

ಇದನ್ನೂ ಓದಿ- ಸಿಎಂ ಮನೆ ಪಕ್ಕದಲ್ಲೇ ಕೆಜಿಗಟ್ಟಲೇ ಚಿನ್ನ ಕದ್ದ ಕಳ್ಳ

ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಭಾಗದ ಎಸಿಪಿ ಎಸ್.ಟಿ.ಒಡೆಯರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ತಂಡವು ಸಿಸಿಬಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್‌ ಮಾರುತಿ ಗುಳ್ಳಾರಿ, ಪ್ರಭು ಗಂಗೇನಹಳ್ಳಿ ಮತ್ತಿತರರ ಸಿಬ್ಬಂದಿಯನ್ನು ಒಳಗೊಂಡಿತ್ತು ಎಂದು ತಿಳಿದುಬಂದಿದೆ. 

ಇದನ್ನೂ ಓದಿ- ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ 

ಹುಬ್ಬಳ್ಳಿ ಗಾಂಧಿವಾಡದ ಅನಫಲ್ ಅಬ್ದುಲ್ ಅಜೀಜ್, ಆಕಾಶಪಾರ್ಕ ನ ವಿಕ್ರಮ್ ಚೌಧರಿ, ನವನಗರದ ದಾವಲ್ ಮಲಿಕ್ ನದಾಫ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1,38,450 ರೂ. ಮೌಲ್ಯದ 0.923 ಗ್ರಾಂ ತೂಕದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಿದ ಒಂದು ಕಾರ್, 3 ಮೊಬೈಲ್, 4000 ರೂ. ನಗದು ಸೇರಿ ಒಟ್ಟು 11.57 ಲಕ್ಷ ರೂ ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಸಿಸಿಬಿ ಪೋಲೀಸರ ಕಾರ್ಯಕ್ಕೆ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News