ಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿಯಲ್ಲಿ ಭಾರೀ ಗಲಾಟೆ ನಡೆದು ಈಗ ಪರಿಸ್ಥಿತಿ ಸ್ವಲ್ಪ ಶಾಂತವಾಗಿದೆ. ಆದ್ರೆ ಗಲಾಟೆಗೂ ಮುನ್ನ ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಮೊಳಗಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಇದೀಗ ಎಲ್ಲೆಡೆ ಹರಿದಾಡುತ್ತಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: "ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ"


ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ ಕಿಡಿಗೇಡಿಗಳು, ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗಲಭೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿದ್ದೇವೆ, ಪ್ರತಿಭಟನೆ ಕೈಬಿಡಿ ಎಂದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ನಮ್ಮ ಕೈಗೆ ನೀಡಿ ಎಂದು ಒತ್ತಾಯಿಸಿದ್ದಲ್ಲದೆ, ಪ್ರತಿಭಟನೆ ಮುಂದುವರೆಸಿದ ಕಿಡಿಗೇಡಿಗಳು ಐಎಸ್‌ಐಎಸ್‌ ಪರ ಘೋಷಣೆ ಕೂಗಿ ಗೂಂಡಾ ವರ್ತನೆ ತೋರಿದ್ದಾರೆ.


ಪ್ರತಿಭಟನೆ ಬೆನ್ನಲ್ಲೇ ಭಾರೀ ಹಿಂಸಾಚಾರ ಕೂಡ ನಡೆದಿತ್ತು. ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದರು. ಪೊಲೀಸ್ ಠಾಣೆ ಮೇಲೆ ಕೂಡ ಕಲ್ಲು ತೂರಾಟ ನಡೆದು, ಪೊಲೀಸರು ಕೂಡ ಗಾಯಗೊಂಡಿದ್ದರು. ಸುಮಾರು ಎರಡು ಲಾರಿಗಳಲ್ಲಿ ಕಲ್ಲುಗಳನ್ನು ತುಂಬಿ ತರಲಾಗಿತ್ತು ಅನ್ನೋ ಮಾಹಿತಿ ಕೂಡ ಇದೆ. ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಈ ಘಟನೆ ಹಿಂದೆ ಕೂಡ ಪಿಎಫ್‌ಐ ಸೇರಿದಂತೆ ಕೆಲ ಸಂಘಟನೆಗಳ ಕೈವಾಡ ಇದೆ ಅಂತ ಹೇಳಲಾಗ್ತಿದೆ.  


ಇದನ್ನು ಓದಿ: "ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ"


ಘಟನೆ ಹಿನ್ನೆಲೆ: 
ಈ ಹಿಂದೆ ಮಕ್ಕಾ ಮಸೀದಿ ಚಿತ್ರದ‌ ಮೇಲೆ ಕೇಸರಿ ಧ್ವಜ ಹಾರಿಸಿದ ಫೋಟೋವನ್ನು ಯುವಕನೊಬ್ಬ ಎಡಿಟ್ ಮಾಡಿ ಶೇರ್ ಮಾಡಿದ್ದ. ಆತನನ್ನು ಹಳೇ ಹುಬ್ಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದರು. ಬಂಧಿತ ಯುವಕ "ತಲೆ ಕೆಟ್ಟರೆ ಇಲ್ಲಿಯೂ ಸಹ ಧ್ವಜ ಹಾರಿಸುತ್ತೇವೆ" ಎಂದು ಪೋಸ್ಟ್ ಮಾಡಿದ್ದ. ಆದ್ದರಿಂದ ಈ ಯುವಕನ್ನು ಬಂಧಿಸುವಂತೆ ಮುಸ್ಲಿಂ ಸಮುದಾಯದ ಜನ ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಠಾಣೆ ಮುಂದೆ‌ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಐಎಸ್‌ಐಎಸ್‌ ಪರ ಘೋಷಣೆ ಕೂಗಿದ್ದಾರೆ ಎನ್ನುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.