Mandya: ಅನುಮಾನದ ಭೂತಕ್ಕೆ ಹೆಂಡತಿ ಕೊಂದು ಮಗನೊಂದಿಗೆ ಪತಿ ಎಸ್ಕೇಪ್!

Murder Case: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ಪತ್ನಿಯ ಶೀಲ ಶಂಕಿಸಿ ಪತಿ ಕೊಲೆ ಮಾಡಿದ್ದು, ಮಗುವನ್ನು ಕರೆದುಕೊಂಡು ಎಸ್ಕೇಪ್ ಆಗಿದ್ದಾನೆ.

Written by - Puttaraj K Alur | Last Updated : Aug 16, 2023, 03:36 PM IST
  • ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿ ಮಗುವಿನೊಂದಿಗೆ ಪತಿ ಎಸ್ಕೇಪ್
  • ಮಂಡ್ಯ ಜಿಲ್ಲೆಯ ನಾಗಮಂಗಲದ ಟಿಬಿ ಬಡಾವಣೆಯಲ್ಲಿ ನಡೆದಿರುವ ಘಟನೆ
  • ಅನುಮಾನ ಎಂಬ ಭೂತಕ್ಕೆ ಸುಂದರ ಕುಟುಂಬದ ಕನಸು ನುಚ್ಚು ನೂರಾಗಿದೆ
Mandya: ಅನುಮಾನದ ಭೂತಕ್ಕೆ ಹೆಂಡತಿ ಕೊಂದು ಮಗನೊಂದಿಗೆ ಪತಿ ಎಸ್ಕೇಪ್! title=
ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!

ಮಂಡ್ಯ: ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾಗಿರುವ ದುರ್ದೈವಿ. ಕಳೆದ ಒಂದೂವರೆ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ಮಧುಶ್ರೀ ಕುಟುಂಬ ವಾಸವಿತ್ತು.

ಮಂಡ್ಯ ತಾಲೂಕಿನ ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಮಧುಶ್ರಿ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ 4 ವರ್ಷದ ಗಂಡು ಮಗುವಿತ್ತು. ಮಂಜುನಾಥ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗಾಗ ಅವರು ಮನೆಗೆ ಬಂದು ಹೋಗುತ್ತಿದ್ದರು. ಸುಖವಾಗಿದ್ದ ಸಂಸಾರದಲ್ಲಿ ಅನುಮಾನ ಎಂಬ ಭೂತಕ್ಕೆ ಸುಂದರ ಕುಟುಂಬ ನುಚ್ಚು ನೂರಾಗಿದೆ.

ಇದನ್ನೂ ಓದಿ: ಹಾವೇರಿ ಅಖಾಡದಲ್ಲಿ ಈಶ್ವರಪ್ಪ ಲೋಕಸಭೆ ತಾಲೀಮು.. ಬಿಜೆಪಿ ಹಿರಿಯರಿಗೆ ಶುರುವಾಯ್ತು ಟಿಕೆಟ್ ಟೆನ್ಶನ್

ಮಂಗಳವಾರ (ಆಗಸ್ಟ್ 15) ಮಧ್ಯಾಹ್ನ ಮಂಜುನಾಥ್ ಬೆಂಗಳೂರಿನಿಂದ ಬಂದಿದ್ದ. ಈ ವೇಳೆ ಮಂಜುನಾಥ್​ ಹಾಗೂ ಮಧುಶ್ರೀ ನಡುವೆ ಯಾವುದೋ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ಪತ್ನಿಯ ಶೀಲ ಶಂಕಿಸಿದ ಮಂಜುನಾಥ್  ಮಧುಶ್ರೀಯನ್ನು ಕೊಲೆ ಮಾಡಿ, ಮಗ ಮನ್ವಿತ್‍ನನ್ನು ಕರೆದುಕೊಂಡು ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಇಂದು (ಆ.16) ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ನಾಗಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕೈ-ದಳ ನಡುವೆ ನಿವೇಶನ ಹಂಚಿಕೆ ಒಪ್ಪಂದ?..ತುಮಕೂರಿನಲ್ಲಿ ನಿಲ್ಲದ ಹಾಲಿ-ಮಾಜಿ ಶಾಸಕರ ಟಾಕ್ ವಾರ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News