ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಹೆಂಡತಿ ಒತ್ತಾಯ : ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿರಾಯ
ಪ್ರೀತಿಸಿ ಮದುವೆಯಾದ ಪತ್ನಿ ಮತಾಂತರವಾಗಲು ಒತ್ತಾಯ ಮಾಡುತ್ತಿದ್ದಾಳೆಂದು ಆರೋಪಿಸಿ ಹೆಂಡತಿ ವಿರುದ್ಧವೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ರಾಜಧಾನಿಯ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ. ಈ ಕುರಿತು ದೂರು ದಾಖಲಾಗಿದೆ.
ಬೆಂಗಳೂರು : ಪ್ರೀತಿಸಿ ಮದುವೆಯಾದ ಪತ್ನಿ ಮತಾಂತರವಾಗಲು ಒತ್ತಾಯ ಮಾಡುತ್ತಿದ್ದಾಳೆಂದು ಆರೋಪಿಸಿ ಹೆಂಡತಿ ವಿರುದ್ಧವೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ರಾಜಧಾನಿಯ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ. ಈ ಕುರಿತು ದೂರು ದಾಖಲಾಗಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ದೀಪಕ್ ತನ್ನ ಪತ್ನಿ ಸುನಿತಾ ಗ್ರೇಸಿ ಮೇಲೆ ದೂರು ನೀಡಿದ್ದಾರೆ. ಪತ್ನಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡುತ್ತಿದ್ದಾಳೆ. ಇದಕ್ಕೆ ಒಪ್ಪದಿದ್ದಾಗ ನಾನಾ ರೀತಿಯಲ್ಲಿ ಕಿರುಕುಳ ಕೊಟ್ಟು ಕಾಣೆಯಾಗಿದ್ದಾನೆಂದು ಸುಳ್ಳು ದೂರುಗಳನ್ನ ನೀಡುತ್ತಿದ್ದಾಳೆಂದು ಪತಿ ಆರೋಪಿಸಿದ್ದಾನೆ. ಅಲ್ಲದೆ, ತನ್ನ ಕುಟುಂಬಸ್ಥರಿಗೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯ, ಜೀವ ಬೆದರಿಕೆ ಹಾಕಿದ್ದಾರೆಂದು ದೀಪಕ್ ದೂರಿದ್ದಾರೆ.
ಇದನ್ನೂ ಓದಿ: ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಸಿಎಂ ಬೊಮ್ಮಾಯಿ
ಇನ್ನು ಪ್ರಕರಣದ ಕುರಿತು ಸುನೀತಾ ಗ್ರೇಸಿ ಹಾಗೂ ಆಕೆಯ ಸಂಬಂಧಿಕರಾದ ಶೋಭಾ ದಯಾನಿಧಿ, ತಮಿಳ್ ಮಣಿ, ಅಂತೋಣಿ ವಿರುದ್ಧ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ದೀಪಕ್ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ದೀಪಕ್ ತನ್ನ ಹೆಂಡತಿ ಸೇರಿದಂತೆ ಆಕೆಯ ಸಂಬಂಧಿಕರು ಮತಾಂತರವಾಗುವಂತೆ ತಮಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಉಲ್ಲೇಖಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.