ಹೃದಯಾಘಾತಕ್ಕೆ ಪತಿ ಬಲಿ; ಆಘಾತದಿಂದ ಆತ್ಮಹತ್ಯೆ ಮಾಡಿಕೊಂಡ ಪತ್ನಿ!
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ನವದೆಹಲಿ: ನವಜೋಡಿಗಳ ಜೀವನ ದುರಂತವಾಗಿ ಅಂತ್ಯವಾಗಿರುವ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ನಿಧನರಾದ 24 ಗಂಟೆಯೊಳಗೆ ಪತ್ನಿ ಕೂಡ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೃತರನ್ನು ಗಾಜಿಯಾಬಾದ್ನ ಯುವ ದಂಪತಿ ಅಭಿಷೇಕ್ ಮತ್ತು ಅಂಜಲಿ ಎಂದು ಗುರುತಿಸಲಾಗಿದೆ.
ಈ ಜೋಡಿ ನವೆಂಬರ್ 30ರಂದು ಹಸೆಮಣೆ ಏರಿತ್ತು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ: Viral Video: ಚಾಲಕನಿಲ್ಲದೆ 84KM ಸಂಚರಿಸಿದ ರೈಲು; ಮುಂದೆ ಆಗಿದ್ದೇನು?
ಬಳಿಕ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆ ವೇಳೆಗಾಗಲೇ ಅಭಿಷೇಕ್ ಸಾವನಪ್ಪಿದ್ದರು. ಅಭಿಷೇಕ್ ಸಾವಿಗೆ ಹೃದಯಾಘಾತವೇ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ಅಭಿಷೇಕ್ ಪಾರ್ಥಿವ ಶರೀರವನ್ನು ಗಾಜಿಯಾಬಾದ್ನ ವೈಶಾಲಿಯಲ್ಲಿರುವ ಅಪಾರ್ಟ್ಮೆಂಟ್ಗೆ ತೆಗೆದುಕೊಂಡು ಹೋಗಲಾಯಿತು.
ಈ ವೇಳೆ ಪತಿಯ ಅಕಾಲಿಕ ಮರಣದ ಆಘಾತವನ್ನು ಸಹಿಸಲಾಗದೆ ಅಭಿಷೇಕ್ ಪತ್ನಿ ಅಂಜಲಿ ತಮ್ಮ ಏಳನೇ ಮಹಡಿಯ ಬಾಲ್ಕನಿಗೆ ಧಾವಿಸಿ ಜಿಗಿದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಆಕೆಯನ್ನು ವೈಶಾಲಿಯ Max ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ: ಅನಂತ್ ಅಂಬಾನಿ ನೇತೃತ್ವದಲ್ಲಿ ಭಾರತದಲ್ಲೇ ಮೊದಲ ಬಾರಿಗೆ ‘ಪ್ರಾಣಿಗಳ ರಕ್ಷಣೆಗಾಗಿ ವಂತಾರ’ದಿಂದ ವಿಶಿಷ್ಟ ಕಾರ್ಯಕ್ರಮ ಘೋಷಣೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.