Family Suicide: ಗಂಡ-ಹೆಂಡತಿ ಹಾಗೂ ಮಗಳು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಪತಿ ಮಹಾದೇವಸ್ವಾಮಿ(42) ಪತ್ನಿ ಸವಿತಾ(33) ಹಾಗೂ ಮಗಳು ಸಿಂಚನಾ(15) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು‌. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಮೃತನ ಅಕ್ಕ-ತಂಗಿಯರ ಹೆಸರು ಬರೆದಿದ್ದು ಇವರಿಗೆಲ್ಲಾ ಶಿಕ್ಷೆ ಆಗಬೇಕೆಂದು ಕೋರಿಕೊಂಡಿದ್ದಾರೆ.


ಇದನ್ನೂ ಓದಿ- Pink WhatsApp: ಬಳಕೆದಾರರಲ್ಲಿ ಭೀತಿ ಸೃಷ್ಟಿಸಿದ ಪಿಂಕ್ ವಾಟ್ಸಾಪ್!


ಮಹಾದೇವಸ್ವಾಮಿ ಮೂಲತಃ ಕೃಷಿಕರಾಗಿದ್ದು  ಸವಿತಾ ಟೈಲರಿಂಗ್ ಮಾಡುತ್ತಿದ್ದರಂತೆ, ಇವರಿಗೆ ಇಬ್ಬರು ಪುತ್ರಿಯರಿದ್ದು ಓರ್ವ ಪುತ್ರಿ ಕಾಲೇಜು ವ್ಯಾಸಂಗ ಮಾಡುತ್ತಿದ್ದು ತಾತನ ಮನೆಯಲ್ಲಿದ್ದಾಳೆ. ಕಿರಿಯ ಮಗಳು ಸಿಂಚನಾ 9 ನೇ ತರಗತಿ ಓದುತ್ತಿದ್ದು ಅಪ್ಪ-ಅಮ್ಮನ ಜೊತೆ ಇದ್ದಳು‌. 


ಇದನ್ನೂ ಓದಿ- ಬಂಡೀಪುರ ಕಾಡಲ್ಲಿ ಮೂರು ಚಿರತೆ ಸಾವು- 1 ಚಿರತೆ ವಿಷಪೂರಿತ ಮಾಂಸ ತಿಂದು ಮೃತ


ಸದ್ಯ, ಮೂವರು ಸಾವಿಗೆ ಶರಣಾಗಿದ್ದು ಗ್ರಾಮ ಬೆಚ್ಚಿ ಬಿದ್ದಿದೆ, ಹೃದಯ ವಿದ್ರಾವಕ ದೃಶ್ಯ ಕಂಡು ಮಮ್ಮಲ ಮರುಗುತ್ತಿದ್ದಾರೆ. ಮೇಲ್ನೋಟಕ್ಕೆ ಹೆಂಡತಿ, ಮಗಳು ಮೊದಲು ಸಾವಿಗೆ ಶರಣಾಗಿದ್ದು ಅದಾದ ಬಳಿಕ ಮಾಹದೇವಸ್ವಾಮಿ ನೇಣಿಗೆ ಕೊರಳೊಡ್ಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೂ, ತನಿಖೆ ಬಳಿಕವಷ್ಟೇ ಈ ನಿಗೂಢ ಸಾವಿಗೆ ಕಾರಣ ಪತ್ತೆಯಾಗಬೇಕಿದೆ. 


ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಜಿಲ್ಲಾ ಎಸ್ಪಿ ಪದ್ಮನಿ ಸಾಹು ಭೇಟಿ ಕೊಟ್ಟಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ