)
IAS Officer Mahantesh Bilagi: ಭೀಕರ ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾ*ವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನೋವಾ ಕಾರಿನಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಐದು ಜನರು ಪ್ರಯಾಣಿಸುತ್ತಿದ್ದರು. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಕಾರಿಗೆ ಶ್ವಾನ ಅಡ್ಡಬಂದಿದೆ. ಶ್ವಾನದ ಪ್ರಾಣ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಪರಿಣಾಮ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಧಿಕಾರಿಯನ್ನ ಕೂಡಲೇ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇನ್ನು ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಣಿ ಇಲಾಖೆ ಎಂಡಿ ಆಗಿ ಕಡಿಮೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಾಂತೇಶ್ ಬೀಳಗಿ ಅವರು ಹಿರಿಯ ಐಎಎಸ್ ಅಧಿಕಾರಿಯಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.