Hubballi: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ಜೂಜಾಟ; 44 ಮಂದಿ ಅರೆಸ್ಟ್!
Cricket Betting Racket: ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ 5 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, 46,630 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ vs ನ್ಯೂಜಿಲೆಂಡ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 6 ಜನರನ್ನು ಬಂಧಿಸಿರುವ ಪೊಲೀಸರು, 11,550 ರೂ. ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿಯ ನೆಹರೂ ನಗರ ಮತ್ತು ಅರವಿಂದ ನಗರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಬಗ್ಗೆ ಗೋಕುಲ ರಸ್ತೆ ಠಾಣೆ ಮತ್ತು ಹಳೇ ಹುಬ್ಬಳ್ಳಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: ರಿಪೇರಿ ಆಗಬೇಕಿರುವ ಶಾಲಾ ಕೊಠಡಿಗಳ ವಿವರದ ಲಿಸ್ಟ್ ಬಿಡುಗಡೆ
ಎಪಿಎಂಸಿ ನವನಗರ ಠಾಣೆ ವ್ಯಾಪ್ತಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಆರ್ಟಿಒ ಕಚೇರಿ ಮತ್ತು ಸುತಗಟ್ಟಿ ಬಳಿ ಹಾಗೂ ವಿದ್ಯಾಗಿರಿ ಠಾಣೆ ವ್ಯಾಪ್ತಿಯ ಲಕ್ಷ್ಮಿ ಸಿಂಗನೇರಿಯಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 38 ಜನರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ 5 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, 46,630 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಸ್ನಲ್ಲಿ ಬಿಟ್ಟುಹೋಗಿದ್ದ ವಸ್ತುಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಆರ್ಟಿಸಿ ನಿರ್ವಾಹಕ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.