ಬೆಂಗಳೂರು: ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ಇಂದು ಶಾಸಕ ಜಮೀರ್‌ ಅಹ್ಮದ್‌ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ‌ ಬಳಿ ಇರುವ ಮನೆ ಸೇರಿದಂತೆ ಐದು ಕಡೆಗಳಲ್ಲಿ ಏಕಕಾಲಕ್ಕೆ ರೇಡ್‌ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ  ದಾಖಲಿಸಿಕೊಂಡ ಎಸಿಬಿ ಇಂದು ದಾಳಿ ನಡೆಸಿ ತನಿಖೆ ನಡೆಸುತ್ತಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ‌ ಬಳಿಯ ನಿವಾಸ,  ಸಿಲ್ವರ್ ಓಕ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ‌ದಾಳಿ ನಡೆಸಲಾಗಿದೆ. 


ಇದನ್ನೂ ಓದಿ: ದಿನಭವಿಷ್ಯ 05-07-2022: ಈ ರಾಶಿಯವರಿಗೆ ಇಂದು ವಾಹನ ಖರೀದಿಸುವ ಯೋಗ


ಎಸಿಬಿ ಅಧಿಕಾರಿಗಳು ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಬಂಬೂಬಜಾರ್‌ನ ಮನೆ ಬಳಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. 


ಐಎಂಎ ಕೇಸ್ ಸಂಬಂಧ ಇಡಿ ಎಸಿಬಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಸಜಮೀರ್‌ಗೆ ಐಎಂಎ ಉರುಳು ಬಿಟ್ಟುಬಿಡದೆ ಕಾಡುತ್ತಿದೆ ಎನ್ನಬಹುದು. 


ಇದನ್ನೂ ಓದಿ: Salary of MLAs: ನಮ್ಮ ರಾಜ್ಯದ ಶಾಸಕರಿಗೆ ತಿಂಗಳಿಗೆ ಸಿಗುವ ವೇತನ ಎಷ್ಟು ಗೊತ್ತೇ?


ಇನ್ನು ಈ ಪ್ರಕರಣದ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನೂ ಸಹ ರಚನೆ ಮಾಡಿತ್ತು. ಈ ಪ್ರಕರಣದಲ್ಲಿ ಅನೇಕರನ್ನು ಈಗಾಗಲೇ ಬಂಧಿಸಿ ತನಿಖೆಯನ್ನೂ ಸಹ ನಡೆಸಲಾಗಿದೆ. ಸದ್ಯ ಈ ಪ್ರಕರಣ ತನಿಖೆಯ ಹಂತದಲ್ಲಿಯೇ ಇದ್ದು, ಇದೀಗ ಎಸಿಬಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.