ಬೆಂಗಳೂರು: ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಇನ್ನೂ ಚೇತರಿಕೆ ಕಂಡಿಲ್ಲ. ಮೂರು ತಿಂಗಳಿನಿಂದಲೂ ಓಲ್ಡ್‌ ಏರ್ಪೋರ್ಟ್ ರಸ್ತೆಯ ಖಾಸಗಿ ಅಸ್ಪತ್ರೆಯ ಐಸಿಯುನಲ್ಲಿ ಶ್ರೀಮಂತ ಇಲ್ಲಾಳ್ ಗೆ ಚಿಕಿತ್ಸೆ ಮುಂದುವರೆದಿದ್ದು ಅರೆ ಪ್ರಜ್ಞಾವಸ್ತೆಯಲ್ಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ : ಶಾರೀಕ್‌ಗೆ ಬೆಂಗಳೂರಿನ ವಿಕ್ಟೋರಿಯಾದಲ್ಲಿ ಚಿಕಿತ್ಸೆ


ಮೆದುಳು ಭಾಗದಲ್ಲಿ ಹೆಚ್ಚಿನ ಗಾಯವಾಗಿರುವುದರಿಂದ ನಿನ್ನೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಈವರೆಗೆ ಒಟ್ಟು ನಾಲ್ಕು ಸರ್ಜರಿ ಮಾಡಲಾಗಿದೆ.ಕಲಬುರಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಕಳೆದ ಸೆಪ್ಟೆಂಬರ್ ನಲ್ಲಿ ಪ್ರಕರಣವೊಂದರ ಆರೋಪಿಗಳ ಬಂಧನಕ್ಕೆ ಮಹಾರಾಷ್ಟ್ರಕ್ಕೆ ತೆರಳಿದ್ದಾಗ ಅವರ ಮೇಲೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು.


ಇದನ್ನೂ ಓದಿ: ಸರ್ಕಾರಿ ಕಚೇರಿಗೇ ಕನ್ನ ಹಾಕಿದ ಖದೀಮರು: ದಾಖಲೆಗಳು ಸೇರಿ ಕಂಪ್ಯೂಟರ್ ಕಳ್ಳತನ!


ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಶ್ರೀಮಂತ ಇಲ್ಲಾಳ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ಹಿಂದೆ ಇನ್ಸ್‌ಪೆಕ್ಟರ್ ಆರೋಗ್ಯದಲ್ಲಿ ಅಲ್ಪ ಸ್ವಲ್ಪ ಸುಧಾರಣೆ ಕಂಡು ಬಂದಿತ್ತಾದರೂ ಮೆದುಳು ಬಳಿ ಗಾಯವಾಗಿದ್ದರಿಂದ ಹೆಚ್ಚಿನ ನಿಗಾ ವಹಿಸಿ ಮತ್ತೊಂದು ಅಗತ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ‌.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.