Acid Attack: ಮೂತ್ರ ವಿಸರ್ಜನೆ ನೆಪದಲ್ಲಿ ಎಸ್ಕೇಪ್‌ ಆಗಲು ಯತ್ನಿಸಿದ ಆ್ಯಸಿಡ್ ನಾಗನಿಗೆ ಗುಂಡೇಟು

ಆರೋಪಿ ನಾಗೇಶ್‌ನ ಬಲದ ಕಾಲಿಗೆ ಗುಂಡು ತಗುಲಿದ್ದು, ಸದ್ಯ ರಾಜರಾಜೇಶ್ವರಿ ಪ್ರಾಥಮಿಕ‌‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ  ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಗದ್ದಲದ ವೇಳೆ ಆರೋಪಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ್ದು, ಅವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.   

Written by - Bhavishya Shetty | Last Updated : May 14, 2022, 09:06 AM IST
  • ಆ್ಯಸಿಡ್ ನಾಗೇಶ್‌ ಕಾಲಿಗೆ ಗುಂಡೇಟು
  • ಮೂತ್ರ ವಿಸರ್ಜನೆ ನೆಪದಲ್ಲಿ ಎಸ್ಕೇಪ್‌ ಆಗಲು ಯತ್ನ
  • ಗುಂಡು ಹಾರಿಸಿದ ಇನ್ಸ್​ಪೆಕ್ಟರ್ ಪ್ರಶಾಂತ್
Acid Attack: ಮೂತ್ರ ವಿಸರ್ಜನೆ ನೆಪದಲ್ಲಿ ಎಸ್ಕೇಪ್‌ ಆಗಲು ಯತ್ನಿಸಿದ ಆ್ಯಸಿಡ್ ನಾಗನಿಗೆ ಗುಂಡೇಟು  title=
Acid attack

ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ಎರಚಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್‍ನನ್ನು ಪೊಲೀಸರು ಬಂಧಿಸಿದ್ದರು. ಆದರೆ ಇದೀಗ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ನಾಗನನ್ನು ಬಂಧಿಸಿ ಕರೆತರುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 

ಇದನ್ನು ಓದಿ: Bengaluru Acid Attack: ಸ್ವಾಮೀಜಿ ವೇಷತೊಟ್ಟು ಎಸ್ಕೇಪ್ ಆಗಿದ್ದ ಆ್ಯಸಿಡ್ ನಾಗ ಅರೆಸ್ಟ್!

ಆರೋಪಿ ನಾಗೇಶ್‌ನ ಬಲದ ಕಾಲಿಗೆ ಗುಂಡು ತಗುಲಿದ್ದು, ಸದ್ಯ ರಾಜರಾಜೇಶ್ವರಿ ಪ್ರಾಥಮಿಕ‌‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ  ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಗದ್ದಲದ ವೇಳೆ ಆರೋಪಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ್ದು, ಅವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಏಪ್ರಿಲ್ 28ರಂದು ಬೆಂಗಳೂರಿನ ಸುಂಕದಕಟ್ಟೆ ಬಳಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಆರೋಪಿ ನಾಗೇಶ್‌ ಆ್ಯಸಿಡ್ ದಾಳಿ ನಡೆಸಿದ್ದ. ಈ ಘಟನೆ ನಡೆದ ಬಳಿಕ ಸ್ವಾಮೀಜಿಯ ವೇಷ ಧರಿಸಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. 

ಇದನ್ನು ಓದಿ: ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗಿಲ್ವಾ ರಕ್ಷಣೆ..? 

ಘಟನೆ ಹಿನ್ನೆಲೆ: 
ಕಾಮಾಕ್ಷಿಪಾಳ್ಯ ಪೊಲೀಸರು ನಾಗೇಶ್‌ನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾಗ ಮೂತ್ರ ವಿಸರ್ಜನೆ ಮಾಡಬೇಕು. ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದಾನೆ. ಇದಕ್ಕೆ ಮೊದಲು ಅವಕಾಶ ಕೊಡದ ಪೊಲೀಸರು ಬಳಿಕ ಆತನ ಒತ್ತಾಯಕ್ಕೆ ಮಣಿದು ಬೆಂಗಳೂರು ಕೆಂಗೇರಿ ಮೇಲ್ಸೇತುವೆ ಬಳಿಕ ಗಾಡಿ ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೆ, ಆತನನ್ನು ಹಿಡಿಯಲು ಹೋದ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ  ಇನ್ಸ್​ಪೆಕ್ಟರ್ ಪ್ರಶಾಂತ್ ಅವರು ಗುಂಡು ಹಾರಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗೇಶ್‌ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಬಂಧಿಸಿ ಆಸ್ಪತ್ರೆಗೆ ಕರೆತಂದಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News