ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ಎರಚಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್‍ನನ್ನು ಪೊಲೀಸರು ಬಂಧಿಸಿದ್ದರು. ಆದರೆ ಇದೀಗ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ನಾಗನನ್ನು ಬಂಧಿಸಿ ಕರೆತರುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: Bengaluru Acid Attack: ಸ್ವಾಮೀಜಿ ವೇಷತೊಟ್ಟು ಎಸ್ಕೇಪ್ ಆಗಿದ್ದ ಆ್ಯಸಿಡ್ ನಾಗ ಅರೆಸ್ಟ್!


ಆರೋಪಿ ನಾಗೇಶ್‌ನ ಬಲದ ಕಾಲಿಗೆ ಗುಂಡು ತಗುಲಿದ್ದು, ಸದ್ಯ ರಾಜರಾಜೇಶ್ವರಿ ಪ್ರಾಥಮಿಕ‌‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ  ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಗದ್ದಲದ ವೇಳೆ ಆರೋಪಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ್ದು, ಅವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 


ಏಪ್ರಿಲ್ 28ರಂದು ಬೆಂಗಳೂರಿನ ಸುಂಕದಕಟ್ಟೆ ಬಳಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಆರೋಪಿ ನಾಗೇಶ್‌ ಆ್ಯಸಿಡ್ ದಾಳಿ ನಡೆಸಿದ್ದ. ಈ ಘಟನೆ ನಡೆದ ಬಳಿಕ ಸ್ವಾಮೀಜಿಯ ವೇಷ ಧರಿಸಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. 


ಇದನ್ನು ಓದಿ: ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗಿಲ್ವಾ ರಕ್ಷಣೆ..? 


ಘಟನೆ ಹಿನ್ನೆಲೆ: 
ಕಾಮಾಕ್ಷಿಪಾಳ್ಯ ಪೊಲೀಸರು ನಾಗೇಶ್‌ನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾಗ ಮೂತ್ರ ವಿಸರ್ಜನೆ ಮಾಡಬೇಕು. ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದಾನೆ. ಇದಕ್ಕೆ ಮೊದಲು ಅವಕಾಶ ಕೊಡದ ಪೊಲೀಸರು ಬಳಿಕ ಆತನ ಒತ್ತಾಯಕ್ಕೆ ಮಣಿದು ಬೆಂಗಳೂರು ಕೆಂಗೇರಿ ಮೇಲ್ಸೇತುವೆ ಬಳಿಕ ಗಾಡಿ ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೆ, ಆತನನ್ನು ಹಿಡಿಯಲು ಹೋದ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ  ಇನ್ಸ್​ಪೆಕ್ಟರ್ ಪ್ರಶಾಂತ್ ಅವರು ಗುಂಡು ಹಾರಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗೇಶ್‌ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಬಂಧಿಸಿ ಆಸ್ಪತ್ರೆಗೆ ಕರೆತಂದಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.