Actress Chetana Raj Death: ಸೊಂಟ ದಪ್ಪವೆಂದು ಮನನೊಂದಿದ್ದ ಚೇತನಾ: ಫ್ಯಾಟ್ ಸರ್ಜರಿ ವೇಳೆ ಸಾವು
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾದ ಪರಿಣಾಮ ಕನ್ನಡದ ಕಿರುತೆರೆ ನಟಿ ಚೇತನಾ ರಾಜ್ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾದ ಪರಿಣಾಮ ಕನ್ನಡದ ಕಿರುತೆರೆ ನಟಿ ಚೇತನಾ ರಾಜ್ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನು ಓದಿ: ಈ ಅಕೌಂಟ್ ನಲ್ಲಿ ಹಣವಿಲ್ಲದಿದ್ದರೂ ತೆಗೆಯಬಹುದು 10 ಸಾವಿರ ರೂಪಾಯಿ ..!
ಸೋಮವಾರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ನವರಂಗ್ ಸರ್ಕಲ್ ಬಳಿಯಿರುವ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ಫ್ಯಾಟ್ ಸರ್ಜರಿಗೆಂದು ಚೇತನಾ ತೆರಳಿದ್ದರು. ಆದರೆ ಈ ವಿಚಾರ ಪೋಷಕರಿಗೆ ತಿಳಿಸಿರಲಿಲ್ಲ. ಸ್ನೇಹಿತರ ಜೊತೆಗೆ ತೆರಳಿದ್ದ ಅವರು ಸರ್ಜರಿಗೆ ಮುಂದಾಗಿದ್ದಾರೆ. ಬಳಿಕ ವಿಷಯ ತಿಳಿದುಕೊಂಡ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ ಆ ವೇಳೆಗಾಗಲೇ ಸರ್ಜರಿ ಪ್ರಾರಂಭಗೊಂಡಿತ್ತು. ಈ ಸಂದರ್ಭದಲ್ಲಿ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿರುವ ಅವರನ್ನು ತಕ್ಷಣವೇ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ಕುಟುಂಬದವರ ಜೊತೆ ವಾಸವಿದ್ದರು. ನಟಿಯ ಸಾವಿನಿಂದ ಕಂಗಾಲಾದ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗಳು ಸಾವಿಗೀಡಾಗಿದ್ದಾಳೆ ಎಂದು ಆರೋಪ ಮಾಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಅಷ್ಟೇ ಅಲ್ಲದೆ, ಇನ್ನಷ್ಟೇ ಬಿಡುಗಡೆಯಾಗಬೇಕಿರುವ ಹವಾಯಾಮಿ ಸಿನಿಮಾದಲ್ಲೂ ಇವರು ನಟಿಸಿದ್ದಾರೆ.
ಈ ಘಟನೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
"ಶ್ವಾಸಕೋಶದಲ್ಲಿ ಕೊಬ್ಬಿನ ಅಂಶ ಶೇಖರಣೆಯಾಗಿ ಈ ಸಾವು ಸಂಭವಿಸಿದೆ. ಅಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆಯೂ ಇಲ್ಲ. ನಮ್ಮ ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ" ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.
ಇದನ್ನು ಓದಿ: ಕೆಕೆಆರ್‌ಗೆ ಪ್ಲೇಆಫ್‌ನ ಲೆಕ್ಕಾಚಾರ ಗೊಂದಲಮಯ!
ಸೊಂಟ ದಪ್ಪ ಇದೆ ಎಂದು ಮನನೊಂದಿದ್ದ ಚೇತನಾ ಫ್ಯಾಟ್ ಸರ್ಜರಿ ಮುಂದಾಗಿದ್ದಳು. ಈ ಬಗ್ಗೆ ಮನೆಯಲ್ಲಿ ಮಾತುಕತೆಯನ್ನೂ ನಡೆಸಿದ್ದಳು. ಆದರೆ ನಾವು ಒಪ್ಪಿಗೆ ಸೂಚಿಸಿರಲಿಲ್ಲ. ಹೀಗಾಗಿ ನಮಗೆ ತಿಳಿಯದಂತೆ ಫ್ಯಾಟ್ ಸರ್ಜರಿಗೆ ಮುಂದಾಗಿದ್ದು, ಸ್ನೇಹಿತರ ಜೊತೆ ಆಸ್ಪತ್ರೆಗೆ ತೆರಳಿದ್ದಳು ಎಂದು ಕುಟುಂಬಸ್ಥರು ಹೇಳಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ