ಬೆಂಗಳೂರು : ಕನ್ನಡದ ʼಆಕಾಶದೀಪʼ ಧಾರಾವಾಹಿ ಖ್ಯಾತಿಯ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನ ವಿರುದ್ಧ ದೈಹಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದು, ನಟಿ ಲವ್ ಜಿಹಾದ್‌ಗೆ ಬಲಿಯಾದ್ರಾ ಎಂಬ ಅನುಮಾನ ಮೂಡುವಂತೆ ಮಾಡಿದೆ.
ಹೌದು, ನಟಿ ದಿವ್ಯಾ ಶ್ರೀಧರ್ ಅವರು ತಮ್ಮ ಪತಿ ಆರ್ನವ್ ಅಲಿಯಾಸ್ ಅಮ್ಜದ್ಖಾನ್ ವಿರುದ್ಧ ದೈಹಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ. ಕನ್ನಡದ ‘ಆಕಾಶದೀಪ’ ಧಾರಾವಾಹಿಯಲ್ಲಿ ದಿವ್ಯಾ ಅಭಿನಯಿಸಿದ್ದ ದಿವ್ಯಾ ಒಳ್ಳೆಯ ಹೆಸರನ್ನು ಗಳಿಸಿದ್ದರು. ನಂತರ ತಮಿಳು ಸಿರಿಯಲ್ ಒಂದರಲ್ಲಿ ನಟಿಸುತ್ತಿದ್ದರು. ಈ ವೇಳೆ ಅವರಿಗೆ ಅರ್ನವ್‌ನ ಪರಿಚಯವಾಗಿತ್ತು. ಅಲ್ಲದೆ, ದಿವ್ಯಾಗೆ ಆರ್ನವ್ ಎಂದು ಅಮ್ಜದ್ ಖಾನ್ ಪರಿಚಯಿಸಿಕೊಂಡಿದ್ದ ಎಂದು ಹೇಳಲಾಗಿದೆ.
ಇದನ್ನೂ ಓದಿ: OSCARS ರೇಸ್‌ನಲ್ಲಿ RRR : ಮತ್ತೊಂದು ಸಾಹಸಕ್ಕೆ ಕೈಹಾಕಿದ ಸ್ಟಾರ್ ಡೈರೆಕ್ಟರ್ ರಾಜಮೌಳಿ..!
ಇನ್ನು, ಕಿರುಕುಳ ಕುರಿತು ಸ್ವತಃ ವಿಡಿಯೋ ಮಾಡಿ ಕಣ್ಣೀರಿಟ್ಟಿರುವ ನಟಿ, ನನಗೂ ಅಮ್ಜದ್ಖಾನ್ಗೂ ಮದುವೆ ಆಗಿದೆ. ಅವನು ನನಗೆ ಸಾಕಷ್ಟು ಹಿಂಸೆ ಕೊಟ್ಟಿದ್ದಾನೆ. ಮದ್ವೆ ವಿಚಾರ ಗುಟ್ಟಾಗಿ ಇಡಲು ಹೇಳಿದ್ದ. ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಾಕದಂತೆ ಎಚ್ಚರಿಕೆ ನೀಡಿದ್ದ. ಇದೇ ವಿಚಾರದಲ್ಲಿ ಹಲವು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಇದೀಗ ನನ್ನನ್ನು ದೂರ ಇಟ್ಟಿದ್ದಾನೆ ಎಂದು ದಿವ್ಯಾ ಕಣ್ಣೀರಿಟ್ಟಿದ್ದಾರೆ. ಗಂಡನಿಂದ ತೀವ್ರ ಹಲ್ಲೆಗೊಳಗಾಗಿರುವ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದಾರೆ. ಸದ್ಯ, ತಮಿಳಿನ ಸೀರಿಯಲ್ ಒಂದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಪತಿಯಿಂದ ಕಿರುಕುಳಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.