"ಶಂಕಿತ ಉಗ್ರರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು"

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಶಂಕಿತ ಉಗ್ರರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಸಹ ಹದ್ದಿನ ಕಣ್ಣಿಟ್ಟಿದ್ದಾರೆ ಎಂದು ಹೇಳಿದರು. 

Written by - Chetana Devarmani | Last Updated : Jun 7, 2022, 12:41 PM IST
  • ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ
  • "ಶಂಕಿತ ಉಗ್ರರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು"
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
"ಶಂಕಿತ ಉಗ್ರರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು" title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್ (38) ನನ್ನು ​ಬಂಧಿಸಿದ್ದಾರೆ.  

ಇದನ್ನೂ ಓದಿ: Suspected terrorist arrested: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಶಂಕಿತ ಉಗ್ರರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಸಹ ಹದ್ದಿನ ಕಣ್ಣಿಟ್ಟಿದ್ದಾರೆ.  ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿತ್ತು. ಕರ್ನಾಟಕ ಪೊಲೀಸರು ಕಾಶ್ಮೀರ ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. 

ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ಜಮ್ಮು-ಕಾಶ್ಮೀರ ಪೊಲೀಸರು ಉಗ್ರನನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  ಜಮ್ಮು ಪೊಲೀಸರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ವಿನಿಮಯವಾಗಿಲ್ಲ. ಮುಂದಿನ ಹಂತದಲ್ಲಿ ನಮ್ಮ ಪೊಲೀಸರು ಸಹ ಈ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು. 

ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಈತ ಓಡಾಡುತ್ತಿದ್ದನಂತೆ. ಉಗ್ರ ತಾಲಿಬ್, ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್​ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.

ಮೂಲತಃ ಜಮ್ಮು ಕಾಶ್ಮೀರದವನೇ ಆದ ತಾಲೀಬ್ ಹುಸೇನ್, ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಜಮ್ಮು ಮತ್ತು ಕಾಶ್ಮೀರ್ ಪೊಲೀಸರು ಹಾಗೂ 17 ನೇ ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತ ಪೊಲೀಸರ ಹಿಟ್ ಲಿಸ್ಟ್‌ನಲ್ಲಿದ್ದ ಎಂದು ಮಾಹಿತಿ ದೊರೆತಿದೆ. 

ಇದನ್ನೂ ಓದಿ: ಕೈಗೆ ಗುಡ್ ಬೈ ಹೇಳಿದ್ದ ಮುಖ್ಯಮಂತ್ರಿ ಚಂದ್ರು ನಾಳೆ AAP ಸೇರ್ಪಡೆ!

ಈ ತ ಬೆಂಗಳೂರಿನಲ್ಲಿ ಬಿಎನ್ಎಲ್‌ ಏರ್ ಸರ್ವಿಸ್ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡಿಕೊಂಡಿದ್ದ. ನಗರದಲ್ಲಿ ಪತ್ನಿ ಮತ್ತು 3 ಜನ ಮಕ್ಕಳ ಜೊತೆಗೆ ವಾಸವಿದ್ದ. ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷ ಈ ತನಿಗೆ ಆಶ್ರಯ ನೀಡಿದ್ದರಂತೆ. ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಸದ್ಯ ತಾಲಿಬ್​ನನ್ನು ಬಂಧಿಸಿರುವ ಪೊಲೀಸರು, ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News