ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮೀಯ ಶೈಲಿಯಲ್ಲಿ 15 ಕಿಮೀ ಕಾರು ಚೇಸ್ ಮಾಡಿ ಅಧಿಕಾರಿಯೊಬ್ಬನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಂಗಧಾಮಯ್ಯ ಎಂಬುವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗೆ ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ ಮಹಾಂತೇಶ್ ಬಿ.ಕಡಬಾಳು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ 12 ಸಾವಿರ ರೂ. ಮುಂಗಡವನ್ನೂ ಪಡೆದುಕೊಂಡು ಬಾಕಿ ಮೊತ್ತವನ್ನು ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಂಗಧಾಮಯ್ಯ ಬೆಂಗಳೂರು ನಗರ ಲೋಕಾಯುಕ್ತ ವಿಭಾಗಕ್ಕೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಲು ಪ್ಲಾನ್ ಮಾಡಿದ್ದರು. ಅದರಂತೆ 43 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿ: ಸತ್ಯವನ್ನು ಮರೆಮಾಚಿ, ಸುಳ್ಳನ್ನೇ ಸತ್ಯವೆಂದು ನಿರೂಪಿಸುವುದು ಕಾಂಗ್ರೆಸ್‍ನ ಸಾಮಾನ್ಯ ಲಕ್ಷಣ: ಬಿಜೆಪಿ
ಮಹಾಂತೇಶ್ ಲಂಚ ಪಡೆಯುತ್ತಿದ್ದ ವೇಳೆ ಆತನನ್ನು ಸೆರೆ ಹಿಡಿಯಲು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು KA 03 MZ 7665 ನಂಬರಿನ ಕಾರಿನಲ್ಲಿ ಹತ್ತಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ಆತನನ್ನು ಟ್ರ್ಯಾಪ್ ಮಾಡು ಬೆನ್ನಟ್ಟಿದ್ದಾರೆ. ಸುಮಾರು 15 ಕಿಮೀವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಸುತ್ತುವರಿದಿದ್ದಾರೆ.
ಈ ವೇಳೆ ಆರೋಪಿಯನ್ನು ಹಿಡಿಯಲು ಯತ್ನಿಸಿದ ಲೋಕಾಯುಕ್ತ ಪೊಲೀಸರು ಮತ್ತು ಸಾಕ್ಷಿಗಳಾಗಿ ಬಂದಿದ್ದ ಸರ್ಕಾರಿ ನೌಕರರ ಮೇಲೆಯೇ ಆತ ಕಾರು ಹತ್ತಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಟಾಟಾ ಸುಮೊ ವಾಹನವನ್ನು ಅಡ್ಡಹಾಕಿ ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಹೆಚ್ ಎನ್ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್.ಎಸ್ ಭೋಸರಾಜು
ಲಂಚದ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಮಹಾಂತೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) (ಸಾರ್ವಜನಿಕ ಸೇವಕರ ಮೇಲೆ ಭ್ರಷ್ಟ ರೀತಿಯಲ್ಲಿ ಪ್ರಭಾವ ಬೀರಲು ಅನಗತ್ಯ ಲಾಭ ಪಡೆದಿರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.