ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮೀಯ ಶೈಲಿಯಲ್ಲಿ 15 ಕಿಮೀ ಕಾರು ಚೇಸ್ ಮಾಡಿ ಅಧಿಕಾರಿಯೊಬ್ಬನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಂಗಧಾಮಯ್ಯ ಎಂಬುವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗೆ ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ ಮಹಾಂತೇಶ್ ಬಿ.ಕಡಬಾಳು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.


COMMERCIAL BREAK
SCROLL TO CONTINUE READING

ಈ ಸಂಬಂಧ 12 ಸಾವಿರ ರೂ. ಮುಂಗಡವನ್ನೂ ಪಡೆದುಕೊಂಡು ಬಾಕಿ ಮೊತ್ತವನ್ನು ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಂಗಧಾಮಯ್ಯ ಬೆಂಗಳೂರು ನಗರ ಲೋಕಾಯುಕ್ತ ವಿಭಾಗಕ್ಕೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಲು ಪ್ಲಾನ್ ಮಾಡಿದ್ದರು. ಅದರಂತೆ 43 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ರೆಡ್‍ಹ್ಯಾಂಡ್‍ ಆಗಿ ಸಿಕ್ಕಿಬಿದ್ದಿದ್ದಾನೆ.


ಇದನ್ನೂ ಓದಿ: ಸತ್ಯವನ್ನು ಮರೆಮಾಚಿ, ಸುಳ್ಳನ್ನೇ ಸತ್ಯವೆಂದು ನಿರೂಪಿಸುವುದು ಕಾಂಗ್ರೆಸ್‍ನ ಸಾಮಾನ್ಯ ಲಕ್ಷಣ: ಬಿಜೆಪಿ


ಮಹಾಂತೇಶ್ ಲಂಚ ಪಡೆಯುತ್ತಿದ್ದ ವೇಳೆ ಆತನನ್ನು ಸೆರೆ ಹಿಡಿಯಲು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು KA 03 MZ 7665 ನಂಬರಿನ ಕಾರಿನಲ್ಲಿ ಹತ್ತಿ  ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ಆತನನ್ನು ಟ್ರ್ಯಾಪ್ ಮಾಡು ಬೆನ್ನಟ್ಟಿದ್ದಾರೆ. ಸುಮಾರು 15 ಕಿಮೀವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಸುತ್ತುವರಿದಿದ್ದಾರೆ.


ಈ ವೇಳೆ ಆರೋಪಿಯನ್ನು ಹಿಡಿಯಲು ಯತ್ನಿಸಿದ ಲೋಕಾಯುಕ್ತ ಪೊಲೀಸರು ಮತ್ತು ಸಾಕ್ಷಿಗಳಾಗಿ ಬಂದಿದ್ದ ಸರ್ಕಾರಿ ನೌಕರರ ಮೇಲೆಯೇ ಆತ ಕಾರು ಹತ್ತಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಟಾಟಾ ಸುಮೊ ವಾಹನವನ್ನು ಅಡ್ಡಹಾಕಿ ಆರೋಪಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಹೆಚ್‌ ಎನ್‌ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್‌.ಎಸ್‌ ಭೋಸರಾಜು


ಲಂಚದ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಮಹಾಂತೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) (ಸಾರ್ವಜನಿಕ ಸೇವಕರ ಮೇಲೆ ಭ್ರಷ್ಟ ರೀತಿಯಲ್ಲಿ ಪ್ರಭಾವ ಬೀರಲು ಅನಗತ್ಯ ಲಾಭ ಪಡೆದಿರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.