ಬೆಂಗಳೂರು : ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್​ಎಸ್​ಬಿ)ಯ  ಚೀಫ್ ಅಕೌಂಟೆಂಟ್ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.


COMMERCIAL BREAK
SCROLL TO CONTINUE READING

ಶಾಸಕ ಮಾಡಳ್ ವಿರೂಪಾಕ್ಷಪ್ಪ ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಮಂಡಳಿಯ ಅಧ್ಯಕ್ಷರಾಗಿದ್ದು, ಇಲ್ಲಿಗೆ ಕಚ್ಚಾ ವಸ್ತುಗಳ ಪೂರೈಕೆ ಸಂಬಂಧ ಟೆಂಡರ್ ಕೊಡಿಸುವುದಾಗಿ ಪ್ರಶಾಂತ್ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಕ್ರೆಸೆಂಟ್ ರಸ್ತೆಯಲ್ಲಿರುವರ ಶಾಸಕ ಮಾಡಳ ವಿರೂಪಾಕ್ಷಪ್ಪ ಕಚೇರಿಯಲ್ಲಿ ಇಂದು 40 ಲಕ್ಷ ಹಣ  ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಟ್ರ್ಯಾಪ್ ಮಾಡಿದ್ದಾರೆ. 


ಇದನ್ನೂ ಓದಿ : HD Kumaraswamy : ಮೈತ್ರಿ ಸರ್ಕಾರದ ಸೀಕ್ರೆಟ್ ಬಿಚ್ಚಿಟ್ಟ ಹೆಚ್.ಡಿ ಕುಮಾರಸ್ವಾಮಿ


ಲೋಕಾಯುಕ್ತ ಎಸ್ ಪಿ ಅಶೋಕ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 81 ಲಕ್ಷ‌ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್‌ ಮಾಡಲ್‌ ಇದ್ದ ಕೆಕೆ ಗೆಸ್ಟ್‌ಹೌಸ್‌ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದರು. ದಾಳಿಯ ಮುಂದುವರಿದ ಭಾಗವಾಗಿ ಡಾಲರ್ಸ್‌ ಕಾಲೋನಿ ನಿವಾಸದಲ್ಲೂ ಲೋಕಾ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.


ಇದನ್ನೂ ಓದಿ : DK Shivakumar : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಡಿಕೆ ಶಿವಕುಮಾರ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.