ಬೆಂಗಳೂರು : ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೇರಿಯಾ ಮೂಲದ ಇಬ್ಬರು ಪ್ರಜೆಗಳನ್ನು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಡೆನಿಯಲ್ ಹಾಗೂ ಖಾಲಿಫ ಅಬುದುಲಿಹಿ ಬಂಧಿತರು. ಈ ಇಬ್ಬರು 5 ವರ್ಷಗಳ ಹಿಂದೆ ವಿದ್ಯಾರ್ಥಿ ವಿಸಾ ಪಡೆದು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. 


ಇದನ್ನೂ ಓದಿ : WATCH: ಸಿಲಿಕಾನ್ ಸಿಟಿಯಲ್ಲಿ ವೀಲಿಂಗ್‌ ಪುಂಡರ ಹಾವಳಿ, ಎದೆ ಝಲ್ ಎನ್ನುವ ದೃಶ್ಯ ಸೆರೆ


ಕಾಲೇಜು ವಿದ್ಯಾರ್ಥಿಗಳು, ಐಟಿ ಬಿಟಿ ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿ 1 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಗೆ  5 ಸಾವಿರದಿಂದ 6‌ ರೂಪಾಯಿ ಪಡೆಯುತ್ತಿದ್ದರು. 


ಸದ್ಯ ಆರೋಪಿಗಳು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು, ಇಬ್ಬರನ್ನು ಬಂಧಿಸಿ 8 ಲಕ್ಷ ಮೌಲ್ಯದ 80 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್ ಫೋನ್‌ ವಶಕ್ಕೆ ಪಡೆದಿದ್ದಾರೆ.


ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ : ಇಲಿ ಕಚ್ಚಿದ್ದಕ್ಕೆ 5 ಲಕ್ಷ ಪರಿಹಾರ ಕೇಳಿದ ಭೂಪ, ಠಾಣಾ ಮೆಟ್ಟಿಲೇರಿದ ಪ್ರಕರಣ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.