Kerala Garbage to Karnataka Again: ಕೇರಳದಿಂದ ಮತ್ತೇ ಕರ್ನಾಟಕಕ್ಕೆ ಕಸ ತರುತ್ತಿರುವ ಗುಮಾನಿಗೆ ಈಗ ನಿದರ್ಶನವಾಗಿ ಕಸ ತುಂಬಿದ ಲಾರಿಯನ್ನು ಜನರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಕೇರಳದಿಂದ ಗುಂಡ್ಲುಪೇಟೆಗೆ ಅಕ್ರಮವಾಗಿ ಆಸ್ಪತ್ರೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಂದಿದ್ದ ಲಾರಿಯನ್ನು ಜನರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಮಾಡ್ರಹಳ್ಳಿ ರಸ್ತೆಯಲ್ಲಿ ಕೇರಳ ನೋಂದಣಿಯ ಲಾರಿಯೊಂದು ನಿಂತಿದ್ದ ವೇಳೆ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ- ಬೆಂಗಳೂರಿನಲ್ಲಿ ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿ!
ಈ ಸಂದರ್ಭ ಲಾರಿಯಲ್ಲಿ ಆಸ್ಪತ್ರೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯದ ಮೂಟೆಗಳು ಇರುವುದು ಕಂಡು ಬಂದಿದ್ದು ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.
ತ್ಯಾಜ್ಯ ವಿಲೇವಾರಿಗೆ ಕೇರಳದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಕದ್ದುಮುಚ್ಚಿ ಲಾರಿಗಳಲ್ಲಿ ತುಂಬಿಕೊಂಡು ಬಂದು ಗಡಿ ದಾಟಿಸಲಾಗುತ್ತದೆ. ತಾಲೂಕನ್ನು ಪ್ರವೇಶಿಸಿದ ನಂತರ ಸಂಚಾರ ಕಡಿಮೆಯಿರುವ ಪ್ರದೇಶ ಅಥವಾ ಕೇರಳ ರಾಜ್ಯದವರು ಮಾಲೀಕರಾಗಿರುವ ತಾಲೂಕಿನ ನಾನಾ ಕಡೆಗಳ ತೋಟಗಳಲ್ಲಿ ತೋಡುಬಾವಿಗಳಲ್ಲಿ ಅಪಾಯಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತದೆ ಎಂಬ ಗಂಭೀರ ಆರೋಪ ಆಗಾಗ್ಗೆ ಕೇಳಿ ಬರುವುದಕ್ಕೆ ಕಸ ತುಂಬಿದ ಲಾರಿಗಳು ಆಗಾಗ್ಗೆ ಕಾಣಿಸಿಕೊಳ್ಳುವುದು ಪುಷ್ಠಿ ನೀಡಿವೆ.
ಇದನ್ನೂ ಓದಿ- Kolkata: 21 ದಿನದ ನವಜಾತ ಶಿಶುವನ್ನು 4 ಲಕ್ಷಕ್ಕೆ ಮಾರಿದ ತಾಯಿ..!
ಸದ್ಯ, ಲಾರಿ ಹಾಗೂ ಲಾರಿ ಚಾಲಕ ಗುಂಡ್ಲುಪೇಟೆ ಪೊಲೀಸರ ವಶದಲ್ಲಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ