Raichur: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ! ಸರಿಯಾಗಿ ಓದು ಎಂದಿದ್ದೇ ತಪ್ಪಾಯ್ತಾ?
Student Suicide: ರಾಯಚೂರು ಜಿಲ್ಲೆ ದೇವದುರ್ಗದ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪವಿತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸರಿಯಾಗಿ ಓದು ಎಂದು ಹೆತ್ತವರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ. ದೇವದುರ್ಗ ತಾಲೂಕಿನ ಬಿ.ಆರ್.ಗುಂಡಾ ಗ್ರಾಮದ ವಿದ್ಯಾರ್ಥಿನಿ 15 ವರ್ಷದ ಪವಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಯಚೂರು ಜಿಲ್ಲೆ ದೇವದುರ್ಗದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪವಿತ್ರಾ ವಸತಿ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಓದಲು ಇಷ್ಟವಿಲ್ಲದೆ ಶಾಲೆ ತಪ್ಪಿಸಿ ಪವಿತ್ರಾ ಮನೆಗೆ ಬರುತ್ತಿದ್ದಳಂತೆ.
ಇದನ್ನೂ ಓದಿ: ಕೈ ಸೇರದ ವೃದ್ಧಾಪ್ಯ ವೇತನ, ಅನ್ನಭಾಗ್ಯದ ಹಣ: ವೃದ್ದೆಯಿಂದ ಡಿಸಿಗೆ ದೂರು
ಮನೆಯಲ್ಲಿ ಪೋಷಕರು ಪವಿತ್ರಾಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿ ಗುರುವಾರ ವಸತಿ ಶಾಲೆಗೆ ಆಕೆಯನ್ನು ಬಿಟ್ಟು ಊರಿಗೆ ಹೋಗಿದ್ದರು. ಆದರೆ ಅಂದು ವಸತಿ ಶಾಲೆಗೆ ಬಂದರೂ ತರಗತಿಗೆ ಪವಿತ್ರಾ ಗೈರಾಗಿದ್ದಳು. ಶಾಲೆಯ ವಿದ್ಯಾರ್ಥಿಗಳು ತರಗತಿಗೆ ಹೋದಾಗ ವಸತಿ ಕೋಣೆಯಲ್ಲಿ ಫ್ಯಾನ್‌ಗೆ ವೇಲ್ ಬಿಗಿದುಕೊಂಡು ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ಪವಿತ್ರಾಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: "ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು, ಅಪರಾಧ ಮುಕ್ತ ಸಮಾಜ ರೂಪಿಸಲು ಸಹಕರಿಸಿ"
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.