KPTCL Recruitment Scam: ಹುಬ್ಬಳ್ಳಿಯಲ್ಲಿ ಪರೀಕ್ಷಾ ಅಕ್ರಮದ ಕಿಂಗ್ಪಿನ್ ಅರೆಸ್ಟ್!
KPTCL ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಆಗಸ್ಟ್ 22ರಂದು 9 ಜನರನ್ನು ಬಂಧಿಸಲಾಗಿತ್ತು. ಆಗಸ್ಟ್ 24ರಂದು ಮತ್ತೆ ಮೂವರನ್ನು ಅರೆಸ್ಟ್ ಮಾಡಲಾಗಿತ್ತು.
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರಿಸಿಕೊಂಡಿದ್ದ ಪ್ರಕರಣದ ಕಿಂಗ್‌ಪಿನ್ ಕೊನೆಗೂ ಪೊಲೀಸ್ ಖೆಡ್ಡಾಕ್ಕೆ ಬಿದ್ದಿದ್ದಾನೆ.
ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಂಜೀವ್ ಲಕ್ಷ್ಮಣ ಭಂಡಾರಿಯನ್ನು ಬೆಳಗಾವಿ ಎಸ್ಪಿ ಸಂಜೀವ ಪಾಟೀಲ್ ನೇತೃತ್ವದ ತಂಡ ಬಂಧಿಸಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರ ಸಹಕಾರದೊಂದಿಗೆ ಬೆಳಗಾವಿ ಜಿಲ್ಲೆಯ ಗೋಕಾಕ ನಿವಾಸಿ ಸಂಜೀವ್ ಭಂಡಾರಿಯನ್ನು ಅರೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: ಮತ್ತದೇ ಹಳೆ ಕ್ಯಾಸೆಟ್, ಸುಳ್ಳು ಅಂಕಿ ಅಂಶ & ಆತ್ಮವಂಚನೆಯ ಮಾತು: ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ
ಆರೋಪಿಯನ್ನು ಬಂಧಿಸಿದ ಬಳಿಕ ಗೋಕಾಕಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ಬಳಿಕ ಆರೋಪಿಯನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಇತ್ತಿಚೆಗಷ್ಟೇ ಸಂಜೀವ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಪರೀಕ್ಷಾರ್ಥಿಗಳಿಂದ ಹಣ ಪಡೆದು ಅಕ್ರಮ ನಡೆಸಲು ಡಿವೈಸ್ ನೀಡಿದ್ದ ಸಂಜೀವ್ ಭಂಡಾರಿಯ ಜಾಮೀನು ಅರ್ಜಿಯನ್ನು ಗೋಕಾಕಿನ 12ನೇ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ವಜಾ ಮಾಡಿತ್ತು.
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಆಗಸ್ಟ್ 22ರಂದು 9 ಜನರನ್ನು ಬಂಧಿಸಲಾಗಿತ್ತು. ಆಗಸ್ಟ್ 24ರಂದು ಮತ್ತೆ ಮೂವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಕಿಂಗ್‍ಪಿನ್ ಬಂಧನದಿಂದ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಪರೀಕ್ಷೆ ನಡೆದಿತ್ತು. ಗೋಕಾಕನಲ್ಲಿ ಪರೀಕ್ಷಾರ್ಥಿ ಸಿದ್ದಪ್ಪ ಮದಿಹಳ್ಳಿಯಿಂದ ಸ್ಮಾರ್ಟ್ ವಾಚ್ ಬಳಸಿ, ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಟೆಲಿಗ್ರಾಮ್ ಆ್ಯಪ್ ಮೂಲಕ ಲೀಕ್ ಮಾಡಲಾಗಿತ್ತು.
ಇದನ್ನೂ ಓದಿ: ಮೈಸೂರಿನ ಹೋಟೆಲ್‌ನಲ್ಲಿ ಪ್ರಿಯಕರನಿಂದಲೇ ಹತ್ಯೆಯಾದ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ!
ಪರೀಕ್ಷಾ ಅಕ್ರಮದ ಕಿಂಗ್‍ಪಿನ್ ಸಂಜೀವ್ ಬಂಧನದ ಬೆನ್ನಲ್ಲೇ ಇನ್ನಷ್ಟು ಜನರ ಅರೆಸ್ಟ್ ಆಗೋ ಸಾಧ್ಯತೆ ಇದೆ. ಪರೀಕ್ಷಾ ಅಕ್ರಮದ ಇನ್ನಷ್ಟು ಆಳಕ್ಕೆ ಇಳಿದಿರುವ ಬೆಳಗಾವಿ ಜಿಲ್ಲಾ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.