ಚಾಮರಾಜನಗರ: ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವ ಜಾಲ ಬೆಳಕಿಗೆ ಬಂದಿದ್ದು ಚಾಮರಾಜನಗರ ಪ್ರಾದೇಶಿಕ ಕೇಂದ್ರದಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.


COMMERCIAL BREAK
SCROLL TO CONTINUE READING

ಮುಕ್ತವಿವಿ ಚಾಮರಾಜನಗರ ಪ್ರಾದೇಶಿಕ ಕೇಂದ್ರದ ಇಬ್ಬರು ಹಂಗಾಮಿ ನೌಕರರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ‌.‌ ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು  ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.


ಇದನ್ನೂ ಓದಿ- ಅಕ್ರಮ ಸಂಬಂಧ.. ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಪತಿ


ಚಾಮರಾಜನಗರ ಪ್ರಾದೇಶಿಕ ಕೇಂದ್ರದ ನೌಕರರು ವಾಟ್ಸಾಪ್ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುತ್ತಿದ್ದರು ಎನ್ನಲಾಗಿದ್ದು ಆನ್ ಲೈನ್ ಮೂಲಕ ಹಣ ಪಡೆದ ಇವರು ಮತ್ತೊಬ್ಬರಿಗೆ ಹಣ ಸಂದಾಯ ಮಾಡುತ್ತಿದ್ದರು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.


ಬಿಕಾಂ ಅಂತಿಮ‌ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವಾಗ ವಿದ್ಯಾರ್ಥಿ ಗಮನಿಸಿ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಗೆ ದೂರು ಕೊಟ್ಟಿದ್ದ, ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. 


ಇದನ್ನೂ ಓದಿ- ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..!


ಪ್ರಾದೇಶಿಕ ನಿರ್ದೇಶಕರ ಕಣ್ತಪ್ಪಿಸಿ ಇವರು‌ ಪ್ರಶ್ನೆ ಪತ್ರಿಕೆ ಹೇಗೆ ಕದಿಯುತ್ತಿದ್ದರು, ಗೌಪ್ಯತೆ ಪಾಲಿಸುತ್ತಿರಲಿಲ್ಲವೇ ಎಂಬಿತ್ಯಾದಿ ಅನುಮಾನ ಮೂಡಿರುವ ಜೊತೆಗೆ ನೌಕರಿ ಮಾಡಿ ಕಷ್ಟಪಟ್ಟು ಓದುವ ಹಲವರಿಗೆ ಇದರಿಂದ ಅನ್ಯಾಯವೂ ಆಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=q9auZ2eqeZo
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.