ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (BWSSB) ಯ ಕಾಮಗಾರಿ ವೇಳೆ ಸಿಮೆಂಟ್ ಸ್ಲ್ಯಾಬ್ ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ದಾರುಣ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ಭಜನಾ ಮಂದಿರ ರಸ್ತೆಯಲ್ಲಿ ನಡೆದಿದೆ. ಸ್ಲ್ಯಾಬ್ ಬಿದ್ದ ಪರಿಣಾಮ ಚಲಪತಿ (25) ಸ್ಥಳದಲ್ಲೇ ಮೃತಪಟ್ಟರೆ ಮುನಿಯಪ್ಪ (45) ಎಂಬಾತ ಗಾಯಗೊಂಡಿದ್ದಾನೆ.
ಇದನ್ನೂ ಓದಿ : Cow Milk or Buffalo Milk: ಹಸುವಿನ ಹಾಲು ಅಥವಾ ಎಮ್ಮೆಯ ಹಾಲು! ಯಾವುದು ಉತ್ತಮ?
ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದವರಾಗಿದ್ದ ಇಬ್ಬರೂ ಕಾರ್ಮಿಕರು BWSSB ಒಳಚರಂಡಿ ಕಾಮಗಾರಿಯಲ್ಲಿ ತೊಡಗಿದ್ದಾಗ ಅವಘಡ ಸಂಭವಿಸಿದೆ. ಪರಿಣಾಮ ಚಲಪತಿ ಸ್ಥಳದಲ್ಲೇ ಮೃತಪಟ್ಟರೆ ಮುನಿಯಪ್ಪ ಗಾಯಗೊಂಡಿದ್ದಾನೆ.
ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿರ್ಲಕ್ಷ್ಯದ ಆರೋಪದಡಿ ಕಾಮಗಾರಿ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ದೇವರಾಜ್ ಎಂಬಾತನ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Kidney Problems: ರಾತ್ರಿ ಹೊತ್ತು ಈ ಲಕ್ಷಣಗಳು ಕಂಡುಬಂದರೆ ಎಚ್ಚರ! ಕಿಡ್ನಿ ವೈಫಲ್ಯದ ಸಂಕೇತವಾಗಿಬಹುದು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.