ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆಳ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಂತ್ರಸ್ತ ರೈತ ಕುಟುಂಬಗಳು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಮೃತ


ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು ಈ ತೀರ್ಪು ಪ್ರಕಟಿಸಿದೆ. ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತ ಕುಟುಂಬಗಳು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತ್ತು. ಬಳಿಕ ತೀರ್ಪನ್ನು ಏಪ್ರಿಲ್‌ 18ರವರೆಗೆ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಕೋರ್ಟ್‌, ಅಲಹಾಬಾದ್ ಹೈಕೋರ್ಟ್‌ ಆಶಿಶ್‌ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಆದೇಶ ನೀಡಿದೆ. 


ಇದನ್ನು ಓದಿ: Covid-19 Latest Update: ಮತ್ತೆ ಅಬ್ಬರಿಸುತ್ತಿದೆ ಕೋವಿಡ್ - ಒಂದೇ ವಾರದಲ್ಲಿ ಶೇಕಡಾ 35 ರಷ್ಟು ಹೆಚ್ಚು ಕೇಸ್


ಏನಿದು ಘಟನೆ: 
ಅಕ್ಟೋಬರ್ 3, 2021 ರಂದು, ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರ ಆಂದೋಲನದ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಈ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಆಶಿಶ್‌ಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದರೆ ಇದೀಗ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶ ಹೊರಡಿಸಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.