ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 14 ವರ್ಷ ಕಾಲ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿ ಹೊರಬಂದಿದ್ದ ಕುಖ್ಯಾತ ರೌಡಿಶೀಟರ್, ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲುಪಾಲಾಗಿದ್ದಾನೆ.
ಶಿವಾಜಿನಗರ ಹಾಗೂ ಪುಲಕೇಶಿನಗರ ಪೊಲೀಸ್ ಠಾಣೆಯ ರೌಡಿಶೀಟರ್ ಮನ್ಸೂರ್ ದಾನ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಈತನ ಅಪ್ರಾಪ್ತ ವಯಸ್ಸಿನ ಮಗನನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕಾಗಿ ಶೋಧಕಾರ್ಯ ಚುರುಕುಗೊಳಿಸಲಾಗಿದೆ.
ಇದನ್ನೂ ಓದಿ- ಪತ್ನಿ ಶವವನ್ನು ಮೂಟೆಯಲ್ಲಿ ಹೊತ್ತೊಯ್ದ ಪತಿ!
ಅಪರಾಧ ಎಸಗುವುದನ್ನು ಕರಗತ ಮಾಡಿಕೊಂಡಿದ್ದ ಮನ್ಸೂನ್ ಡಿಸೆಂಬರ್ 5ರ ತಡರಾತ್ರಿ ನಾಗವಾರದ ಕನಕನಗರ ಬಳಿ ವಕೀಲ ಅಹಮ್ಮದ್ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಕಾರ್ ಜೊತೆಗೆ ಮೊಬೈಲ್ ದರೋಡೆ ಮಾಡಿ ಕಾಲ್ಕಿತ್ತಿದ್ದಾರೆ. ಕೃತ್ಯದ ಮಾಹಿತಿ ಮೇಲೆ ಕಾರ್ಯಪ್ರವೃತ್ತರಾದ ಡಿ.ಜೆ.ಹಳ್ಳಿ ಪೊಲೀಸರು ನ ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಮನ್ಸೂರ್ ನನ್ನ 20 ನಿಮಿಷದಲ್ಲೇ ಬಂಧಿಸಿದ್ದಾರೆ.
ಇದನ್ನೂ ಓದಿ- ಚಿಕ್ಕಬಳ್ಳಾಪುರ ASI ಮನೆಗೆ ನುಗ್ಗಿ ಶೂಟೌಟ್ ಮಾಡಿ ದರೋಡೆ ಪ್ರಕರಣ : ಆರೋಪಿಗಳ ಬಂಧನ
ಆರೋಪಿ ಮೇಲೆ ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ ಸೇರಿ ಸುಮಾರು 20ಕ್ಕಿಂತ ಹೆಚ್ಚು ಕೇಸ್ ಗಳಿವೆ. ಮನ್ಸೂರ್ ಈ ಹಿಂದೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸ್ ನಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ. ಶಿವಾಜಿನಗರದಲ್ಲಿ ವಾಸವಾಗಿದ್ದ ಮನ್ಸೂರ್ ಹಣಕ್ಕಾಗಿ ಅಪರಾಧ ಕೃತ್ಯ ಎಸಗುತ್ತಿದ್ದ. 16 ವರ್ಷದ ಮಗನನ್ನ ಜೊತೆಗೆ ಕರೆದುಕೊಂಡು ಕ್ರೈಂ ಎಸಗುತ್ತಿದ್ದ. ಮಾಜಿ ರೈಲ್ವೇ ಸಚಿವ ದಿ. ಜಾಫರ್ ಶರೀಫ್ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.